ಕಾಂಗ್ರೆಸ್‌ನ ಅಧೀರ್ ರಂಜನ್ ಸೇರಿ 30 ಕ್ಕೂ ಹೆಚ್ಚು ಸಂಸದರು ಲೋಕಸಭೆಯಿಂದ ಸಸ್ಪೆಂಡ್

MPs suspended from Lok Sabha: ಸದನದಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಲೋಕಸಭೆಯಿಂದ ಸೋಮವಾರ 30 ಕ್ಕೂ ಹೆಚ್ಚು ಸದಸ್ಯರನ್ನು ಅಮಾನತುಗೊಳಿಸಲಾಗಿದೆ.    

Written by - Chetana Devarmani | Last Updated : Dec 18, 2023, 05:02 PM IST
  • ಸದನದಲ್ಲಿ ಗದ್ದಲ ಸೃಷ್ಟಿಸಿದ ಆರೋಪ
  • ಲೋಕಸಭೆಯಿಂದ ಸಂಸದರು ಅಮಾನತು
  • 30 ಕ್ಕೂ ಹೆಚ್ಚು ಸದಸ್ಯರು ಅಮಾನತು
ಕಾಂಗ್ರೆಸ್‌ನ ಅಧೀರ್ ರಂಜನ್ ಸೇರಿ 30 ಕ್ಕೂ ಹೆಚ್ಚು ಸಂಸದರು ಲೋಕಸಭೆಯಿಂದ ಸಸ್ಪೆಂಡ್  title=

ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಸೋಮವಾರ (ಡಿಸೆಂಬರ್ 18) ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಇಂದು 30 ಕ್ಕೂ ಹೆಚ್ಚು ಸಂಸದರು ಅಮಾನತುಗೊಂಡಿದ್ದಾರೆ. ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಲೋಪ ಘಟನೆಯ ಬಗ್ಗೆ ವಿರೋಧ ಪಕ್ಷದ ಸಂಸದರು ಗದ್ದಲವನ್ನು ಸೃಷ್ಟಿಸಿದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. 

ಸದನದಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಸ್ಪೀಕರ್ ಓಂ ಬಿರ್ಲಾ ಅವರು 30ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿದ್ದಾರೆ. ಅಮಾನತುಗೊಂಡವರಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಡಿಎಂಕೆ ನಾಯಕ ಟಿಆರ್ ಬಾಲು ಕೂಡ ಸೇರಿದ್ದಾರೆ. ಸ್ಪೀಕರ್ ಅವರ ಈ ಕ್ರಮ ಸರ್ವಾಧಿಕಾರ ಎಂದು ಕಾಂಗ್ರೆಸ್ ಬಣ್ಣಿಸಿದೆ.

ಇದನ್ನೂ ಓದಿ: ಸಮರ್ ವಾಯು ರಕ್ಷಣಾ ವ್ಯವಸ್ಥೆಯ ಯಶಸ್ವಿ ಪರೀಕ್ಷಾ ಪ್ರಯೋಗ ನಡೆಸಿದ ಭಾರತ: ನಮ್ಮ ಆಗಸಗಳಿನ್ನು ಸುರಕ್ಷಿತ 

ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಚಳಿಗಾಲದ ಅಧಿವೇಶನದ ಎಲ್ಲ ಕಲಾಪಗಳಿಗೂ ಗದ್ದಲ ಸೃಷ್ಟಿಸುವ ಎಲ್ಲಾ ಸಂಸದರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದರು. ಈ ಮನವಿಯ ಮೇರೆಗೆ ಸ್ಪೀಕರ್ ಓಂ ಬಿರ್ಲಾ ಅವರು ಅಧೀರ್ ರಂಜನ್ ಚೌಧರಿ ಮತ್ತು ಟಿಆರ್ ಬಾಲು ಸೇರಿದಂತೆ 30 ಕ್ಕೂ ಹೆಚ್ಚು ವಿರೋಧ ಪಕ್ಷದ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಿದರು.  

ಸಂಸದರ ಸಾಮೂಹಿಕ ಅಮಾನತನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಸದನದಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಮತ್ತೊಮ್ಮೆ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ. ಇದು ಮೋದಿ ಸರ್ಕಾರದ ಸರ್ವಾಧಿಕಾರ. ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸಂಸದರು ಪ್ರಧಾನಿ ಮತ್ತು ಗೃಹ ಸಚಿವರಿಂದ ಉತ್ತರವನ್ನು ಕೇಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ. 

ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಪ್ರಶ್ನೆ ಕೇಳುವುದು ಪ್ರತಿಪಕ್ಷಗಳ ಹಕ್ಕು ಮತ್ತು ಉತ್ತರ ನೀಡುವುದು ಸರ್ಕಾರದ ಜವಾಬ್ದಾರಿ. ಇದು ಜನರ ಧ್ವನಿಯನ್ನು ಹತ್ತಿಕ್ಕುವ ದಬ್ಬಾಳಿಕೆಯ ಧೋರಣೆ ಮತ್ತು ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಉಲ್ಲಂಘನೆಯಾಗಿದೆ. ಆದರೆ ನಾವು ಹೆದರುವುದಿಲ್ಲ, ನಾವು ಹೋರಾಡುತ್ತಲೇ ಇರುತ್ತೇವೆ. ಮೋದಿ ಸರಕಾರ ಉತ್ತರ ಕೊಡಬೇಕು ಎಂದು ಕಾಂಗ್ರೆಸ್‌ ಹೇಳಿದೆ. 

ಇದನ್ನೂ ಓದಿ: ಸಿಟಿ ರವಿ, ಅಶ್ವಥ್ ನಾರಾಯಣ್ 'ಫೇಕ್ ನ್ಯೂಸ್ ಪೆಡ್ಲರ್'ಗಳು: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News