ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಕುಲ್ ವಾಸ್ನಿಕ್ ಹೆಸರು ಸೂಚಿಸಿದ G-23

ಹಿರಿಯ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರ ಹೆಸರನ್ನು G-23 ನಾಯಕರು ನೂತನ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದಾರೆ ಎಂದು ಆಂತರಿಕ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

Last Updated : Mar 13, 2022, 05:54 PM IST
  • ಐದು ರಾಜ್ಯಗಳಲ್ಲಿ 2022 ರ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲು ಭಾನುವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉನ್ನತ ಮಟ್ಟದ ಸಭೆಯ ಹಿನ್ನಲೆಯ ಈ ವರದಿಗಳು ಬಂದಿವೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮುಕುಲ್ ವಾಸ್ನಿಕ್ ಹೆಸರು ಸೂಚಿಸಿದ G-23 title=

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರ ಹೆಸರನ್ನು G-23 ನಾಯಕರು ನೂತನ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದಾರೆ ಎಂದು ಆಂತರಿಕ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಐದು ರಾಜ್ಯಗಳಲ್ಲಿ 2022 ರ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಕಳಪೆ ಪ್ರದರ್ಶನದ ಬಗ್ಗೆ ಚರ್ಚಿಸಲು ಭಾನುವಾರ ಸಂಜೆ 4 ಗಂಟೆಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉನ್ನತ ಮಟ್ಟದ ಸಭೆಯ ಹಿನ್ನಲೆಯ ಈ ವರದಿಗಳು ಬಂದಿವೆ.

ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ರಾಸಾಯನಿಕ ದಾಳಿ ಕುರಿತು ನ್ಯಾಟೋ ಮುಖ್ಯಸ್ಥರು ಹೇಳಿದ್ದೇನು?

ಪಕ್ಷದ ಭಿನ್ನಮತೀಯ ನಾಯಕರ ಗುಂಪಾಗಿರುವ G-23 ಯಲ್ಲಿ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಅವರಂತಹ ಅನುಭವಿಗಳು ಮುಕುಲ್ ವಾಸ್ನಿಕ್ (Mukul Wasnik) ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಿದ್ದಾರೆ.ಆದರೆ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ವಾಸ್ನಿಕ್ ಹೆಸರನ್ನು ಅಂಗೀಕರಿಸಲಿಲ್ಲ ಎಂದು ವರದಿಗಳು ಹೇಳಿವೆ.

'ಸೋನಿಯಾ ಗಾಂಧಿಯವರು (ಹಂಗಾಮಿ) ಅಧ್ಯಕ್ಷರಾಗಿದ್ದರೂ, ಅದನ್ನು ಕೆಸಿ ವೇಣುಗೋಪಾಲ್, ಅಜಯ್ ಮಾಕನ್ ಮತ್ತು ರಣದೀಪ್ ಸುರ್ಜೆವಾಲಾ ಅವರು ನಡೆಸುತ್ತಿದ್ದಾರೆ.ಅವರ ಮೇಲೆ ಯಾವುದೇ ರೀತಿಯ ಹೊಣೆಗಾರಿಕೆ ಇಲ್ಲ.ರಾಹುಲ್ ಗಾಂಧಿ ಅಧ್ಯಕ್ಷರಲ್ಲ, ಆದರೆ ಅವರು ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೆ ಅವರು ಬಹಿರಂಗವಾಗಿ ಸಂವಹನ ನಡೆಸುವುದಿಲ್ಲ. ನಾವು ಪಕ್ಷದ ಹಿತೈಷಿಗಳೇ ಹೊರತು ಶತ್ರುಗಳಲ್ಲ" ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Russia-Ukraine war: ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತೆ ವಿಚಾರವಾಗಿ ಮಹತ್ವದ ಸಭೆ

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವು ಸತತ ಎರಡನೇ ಸೋಲಿನ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು.

ನಂತರ, ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ನೇತೃತ್ವವನ್ನು ವಹಿಸಿಕೊಂಡ ಸೋನಿಯಾ ಗಾಂಧಿ ಅವರು ಜಿ -23 ಎಂದು ಉಲ್ಲೇಖಿಸಲಾದ ನಾಯಕರ ಒಂದು ವಿಭಾಗದ ಬಹಿರಂಗ ಬಂಡಾಯದ ನಂತರ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ ಸಿಡಬ್ಲ್ಯೂಸಿ ಅವರನ್ನು ಮುಂದುವರಿಯಲು ಮನವಿ ಮಾಡಿಕೊಂಡಿತ್ತು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

Trending News