ನಾಗ್ಪುರ: ನಿರ್ಮಾಣ ಹಂತದಲ್ಲಿದ್ದ ಆಸ್ಪತ್ರೆ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ನಾಗ್ಪುರದಲ್ಲಿ ನಡೆದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಕಟ್ಟಡದಲ್ಲಿ ಸಿಲುಕಿರುವ ಸಾಧ್ಯತೆಯಿದೆ. ಅವರಲ್ಲಿ ಹೆಚ್ಚು ಮಂದಿ ಕಾರ್ಮಿಕರಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ.
ಬೆಂಕಿ ಅವಘಡಕ್ಕೆ ಸೂಕ್ತ ಕಾರಣಗಳೇನು ಎಂಬುದು ಇದುವರೆಗೂ ಖಚಿತವಾಗಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್'ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
Maharashtra: Fire breaks out in an under-construction hospital in Nagpur. Ten fire tenders are at the spot and the situation is under control now. pic.twitter.com/DVsCgvhyTY
— ANI (@ANI) January 9, 2019
ಕೂಡಲೇ ಸ್ಥಳಕ್ಕಾಗಮಿಸಿದ 10 ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸೇನಾಪಡೆ ಕೂಡ ರಕ್ಷಣಾ ಕಾರ್ಯಕ್ಕೆ ಸಾಥ್ ನೀಡಿದ್ದು, ಬೆಂಕಿಯ ತೀವ್ರತೆ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.
ಡಿಸೆಂಬರ್ 29ರಂದು ಮುಂಬೈನ ವರ್ಲಿಯಲ್ಲಿರುವ ಸಾಧನ ಹೌಸ್'ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ 12 ಅಗ್ನಿಶಾಮಕ ಸಿಬ್ಬಂದಿ ಬೆಂಕಿಯ ಜ್ವಾಲೆ ತಗುಲಿ ಗಾಯಗೊಂಡಿದ್ದರು.