ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನ

PM Narendra Modi Oath Ceremony: ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.   

Written by - Chetana Devarmani | Last Updated : Jun 9, 2024, 11:43 AM IST
  • ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ
  • ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಮೋದಿ ಭೇಟಿ
  • ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿಗೆ ಪುಷ್ಪ ನಮನ
ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನ  title=

Narendra Modi Oath Taking Ceremony: ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ, ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ನರೇಂದ್ರ ಮೋದಿ ಭೇಟಿ ನೀಡಿದರು. ನಿಯೋಜಿತ ಪ್ರಧಾನಿಯ ಮೋದಿ ಅವರಿಗೆ ನಿರ್ಗಮಿತ ಸಂಪುಟದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್‌ ನೀಡಿದರು. 

ಇದನ್ನೂ ಓದಿ: 15 ದಿನಗಳಲ್ಲಿಯೇ ನರೇಂದ್ರ ಮೋದಿ ಸರ್ಕಾರ ಪತನ: ಮಮತಾ ಬ್ಯಾನರ್ಜಿ ಭವಿಷ್ಯ!

ನರೇಂದ್ರ ಮೋದಿ ಇಂದು ಅಂದರೆ ಜೂನ್ 9 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15 ಕ್ಕೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದೇ ಅವರ ಮಂತ್ರಿಮಂಡಲವೂ ಪ್ರಮಾಣವಚನ ಸ್ವೀಕರಿಸಲಿದೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಹೊರೆಯ ದೇಶದ ಹಲವಾರು ನಾಯಕರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ. 

543 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದ್ದು, ಎನ್‌ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 100 ಸ್ಥಾನ ಗಳಿಸಿದೆ. ಸಮಾಜವಾದಿ ಪಕ್ಷ 37 ಸ್ಥಾನಗಳನ್ನು ಪಡೆದರೆ, ತೃಣಮೂಲ ಕಾಂಗ್ರೆಸ್ 29, ಡಿಎಂಕೆ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. 

ಇದನ್ನೂ ಓದಿ: PM Modi Oath Ceremony: ಕುಮಾರಸ್ವಾಮಿ, ಬೊಮ್ಮಾಯಿ ಸೇರಿ ರಾಜ್ಯದ ಐವರಿಗೆ ಮೋದಿ 3.0ದಲ್ಲಿ ಸ್ಥಾನ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News