ಎನ್‌‌ಡಿಎಗೆ ಭರ್ಜರಿ ಮುನ್ನಡೆ; ಮತದಾರರಿಗೆ ಮೋದಿ ತಾಯಿ ಹೇಳಿದ್ದೇನು?

ಬಿಜೆಪಿ ಕಾರ್ಯಕರ್ತರು ಗುಜರಾತಿನ ಗಾಂಧಿನಗರದಲ್ಲಿರುವ ನರೇಂದ್ರ ಮೋದಿ ಅವರ ಮನೆಯ ಮುಂದೆ ಜಮಾಯಿಸಿ ಮೋದಿ ಅವರಿಗೆ ಜೈಕಾರ ಹಾಕುತ್ತಿದ್ದಾರೆ.  

Last Updated : May 23, 2019, 12:29 PM IST
ಎನ್‌‌ಡಿಎಗೆ ಭರ್ಜರಿ ಮುನ್ನಡೆ; ಮತದಾರರಿಗೆ ಮೋದಿ ತಾಯಿ ಹೇಳಿದ್ದೇನು? title=
Pic Courtesy: ANI

ನವದೆಹಲಿ: ಕಳೆದ ಎರಡು ತಿಂಗಳಿನಿಂದ ನಡೆದ ಲೋಕಸಭಾ ಚುನಾವಣಾ ಪ್ರಕ್ರಿಯೆ ಕೊನೆಯ ಹಂತ ತಲುಪಿದ್ದು, 545 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಮತಎಣಿಕೆ ಇಂದು ಬೆಳಿಗ್ಗೆ 8 ಗಂಟೆಯಿಂದ ದೇಶಾದ್ಯಂತ ಏಕಕಾಲಕ್ಕೆ ಆರಂಭವಾಗಿದೆ. 

2014ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದ್ದ ಎನ್‌‌ಡಿಎ ಮೈತ್ರಿಕೂಟ,  2019ರ ಲೋಕಸಭಾ ಚುನಾವಣೆಯಲ್ಲಿಯೂ ಭಾರೀ ಮುನ್ನಡೆ ಸಾಧಿಸಿದ್ದು, ದೇಶದ ಆಡಳಿತದ ಚುಕ್ಕಾಣಿ ಹಿಡಿಯುವ ಎಲ್ಲಾ ಸಾಧ್ಯತೆಗಳೂ ಕಂಡುಬಂದಿದೆ. ಈ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಗುಜರಾತಿನ ಗಾಂಧಿನಗರದಲ್ಲಿರುವ ನರೇಂದ್ರ ಮೋದಿ ಅವರ ಮನೆಯ ಮುಂದೆ ಜಮಾಯಿಸಿ ಮೋದಿ ಅವರಿಗೆ ಜೈಕಾರ ಹಾಕುತ್ತಿದ್ದಾರೆ.

ಈ ಸಂದರ್ಭದಲ್ಲಿ ಮನೆಯಿಂದ ಹೊರಬಂದ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​​​ ಮೋದಿ, ಜೈಕಾರ ಕೂಗುತ್ತಿದ್ದ ಕಾರ್ಯಕರ್ತರಿಗೆ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ. ಮತ್ತೊಮ್ಮೆ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ಸಂತಸದಲ್ಲಿರುವ ಹೀರಾಬೇನ್ ಮೋದಿ ಅವರು, ಕೈಮುಗಿದು ಎಲ್ಲರಿಗೂ ನಮಸ್ಕರಿಸಿ ಧನ್ಯವಾದ ಅರ್ಪಿಸಿದ್ದಾರೆ.

Trending News