ರಾಜ್ಯಗಳ ಸಹಕಾರವಿಲ್ಲದೆ ಗುರಿ ಸಾಧನೆ ಅಸಾಧ್ಯ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಬಜೆಟ್ ಮಂಡನೆಗೂ ಮೊದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಹಣಕಾಸು ಸಚಿವರ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

Last Updated : Jun 21, 2019, 02:48 PM IST
ರಾಜ್ಯಗಳ ಸಹಕಾರವಿಲ್ಲದೆ ಗುರಿ ಸಾಧನೆ ಅಸಾಧ್ಯ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ title=
File Image

ನವದೆಹಲಿ: ಬಜೆಟ್ ಮಂಡನೆಗೂ ಮೊದಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಹಣಕಾಸು ಸಚಿವರ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಎಲ್ಲಿಯವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಾಗಿ ಕೆಲಸ ಮಾಡುವುದಿಲ್ಲವೋ, ಅಲ್ಲಿವರೆಗೆ ನಿರ್ದಿಷ್ಟ ಗುರಿ ಸಾಧಿಸುವುದು ಅಸಾಧ್ಯ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿದ ನೀತಿ ರೂಪಿಸುವುದು ಮತ್ತು ಮಾರ್ಗವನ್ನು ಸಿದ್ಧಪಡಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಈ ನೀತಿಗಳನ್ನು ಉತ್ತಮ ರೀತಿಯಲ್ಲಿ ಜಾರಿಗೆ ತರುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂಬುದನ್ನು ವಿತ್ತ ಸಚಿವರು ಸ್ಪಷ್ಟಪಡಿಸಿದರು.

ಸಾಧ್ಯವಿರುವ ಎಲ್ಲ ಸಹಾಯಕ್ಕೂ ಕೇಂದ್ರ ಸರ್ಕಾರ ಸಿದ್ಧ:
14 ನೇ ಹಣಕಾಸು ಆಯೋಗದ ಶಿಫಾರಸಿನ ಆಧಾರದ ಮೇಲೆ, 13 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ, ಇತ್ತೀಚಿನ ವರ್ಷಗಳಲ್ಲಿ, ರಾಜ್ಯಗಳಿಗೆ ನೀಡುತ್ತಿದ್ದ ಅನುದಾನವನ್ನು 8,29,344 ಕೋಟಿಯಿಂದ 12,38,274 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ದೇಶವಾಸಿಗಳ ಆಕಾಂಕ್ಷೆಗಳನ್ನು ಈಡೇರಿಸುವ ಸಲುವಾಗಿ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಹಕಾರಕ್ಕಾಗಿ ಕರೆ ನೀಡಿವೆ. ಈ ಗುರಿಗಳನ್ನು ಈಡೇರಿಸಲು, ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

Trending News