ನಾಳೆಯ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಯ್ಕೆ ಸಾಧ್ಯತೆ

 ಶನಿವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ನಾಳೆ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಹಿನ್ನಲೆಯಲ್ಲಿ ಈಗ ಈ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.

Last Updated : Aug 9, 2019, 04:10 PM IST
ನಾಳೆಯ ಸಿಡಬ್ಲ್ಯೂಸಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಆಯ್ಕೆ ಸಾಧ್ಯತೆ    title=
file photo

ನವದೆಹಲಿ:  ಶನಿವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ನಾಳೆ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಹಿನ್ನಲೆಯಲ್ಲಿ ಈಗ ಈ ಸಭೆಗೆ ಹೆಚ್ಚಿನ ಮಹತ್ವ ಬಂದಿದೆ.

ಲೋಕಸಭೆ ಚುನಾವಣೆ ಕಾಂಗ್ರೆಸ್ ಹೀನಾಯ ಸೋಲನ್ನು ಕಂಡ ಹಿನ್ನಲೆಯಲ್ಲಿ ಪಕ್ಷದ ಕಳಪೆ ಪ್ರದರ್ಶನದ ಜವಾಬ್ದಾರಿ ಹೊತ್ತ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಹಿನ್ನಲೆಯಲ್ಲಿ ಮೇ ತಿಂಗಳಲ್ಲಿ ರಾಜೀನಾಮೆ ಘೋಷಿಸಿದಾಗಿನಿಂದ ಖಾಲಿ ಉಳಿದಿದೆ. ಈ ಸಭೆ ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯಲ್ಲಿ ನಡೆಯಲಿದೆ. ಗಾಂಧಿಯ ಉತ್ತರಾಧಿಕಾರಿಯನ್ನು ನಿರ್ಧರಿಸುವುದು ಈ ಸಭೆ ಮುಖ್ಯ ಕಾರ್ಯಸೂಚಿಯಾಗಿದೆ.

ಹಲವಾರು ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಸಂಭಾವ್ಯ ಹೆಸರುಗಳಾಗಿ ಮಲ್ಲಿಕಾರ್ಜುನ್ ಖರ್ಗೆ ಮತ್ತು ಸುಶೀಲ್ ಕುಮಾರ್ ಶಿಂದೆಯವರ ಹೆಸರುಗಳು ಕೇಳಿ ಬಂದಿದ್ದವು. ಆದರೆ ಅವ್ಯಾವು ಕೂಡ ಅಂತಿಮವಾಗಿರಲಿಲ್ಲ. ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪಕ್ಷದ ಹುದ್ದೆಯನ್ನು ಯುವಕರಿಗೆ ನೀಡುವುದು ಸೂಕ್ತ ಎಂದು ಹೇಳಿದ್ದರು. ಈ ಹಿನ್ನಲೆಯಲ್ಲಿ ಈಗ ನಾಳೆ ಪಕ್ಷದ ಸಭೆ ಹಿರಿತನಕ್ಕೆ ಆಧ್ಯತೆ ನೀಡುತ್ತೋ ಅಥವಾ ಯುವಕರಿಗೆ ಮಣೆ ಹಾಕುತ್ತೋ ಎನ್ನುವುದು ನಾಳೆ ತಿಳಿಯಲಿದೆ ಎನ್ನಲಾಗಿದೆ.

Trending News