Ministry Of Health : ರಾಜ್ಯಗಳು ಎಚ್ಚೆತ್ತುಕೊಳ್ಳಬೇಕು, ಆಸ್ಪತ್ರೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ; ಕೋವಿಡ್ ಕುರಿತು ಕೇಂದ್ರದ ಹೊಸ ಗೈಡ್ ಲೈನ್!

Ministry Of Health : ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಕೊರೊನಾ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ರಾಜ್ಯಗಳು ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ.

Written by - Channabasava A Kashinakunti | Last Updated : Dec 23, 2022, 07:21 PM IST
  • ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ
  • ಕೊರೊನಾ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ
  • ಮುಂಬರುವ ಹಬ್ಬ ಹರಿದಿನಗಳು ಮತ್ತು ಹೊಸ ವರ್ಷದ ಆಚರಣೆ
Ministry Of Health : ರಾಜ್ಯಗಳು ಎಚ್ಚೆತ್ತುಕೊಳ್ಳಬೇಕು, ಆಸ್ಪತ್ರೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ; ಕೋವಿಡ್ ಕುರಿತು ಕೇಂದ್ರದ ಹೊಸ ಗೈಡ್ ಲೈನ್! title=

Ministry Of Health : ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಪತ್ರ ಬರೆಯುವ ಮೂಲಕ ಕೊರೊನಾ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ರಾಜ್ಯಗಳು ಎಚ್ಚರಿಕೆ ವಹಿಸುವಂತೆ ಸಚಿವಾಲಯ ತಿಳಿಸಿದೆ. ಅಲ್ಲದೆ, ಮುಂಬರುವ ಹಬ್ಬ ಹರಿದಿನಗಳು ಮತ್ತು ಹೊಸ ವರ್ಷದ ಆಚರಣೆಗಳನ್ನು ಗಮನದಲ್ಲಿಟ್ಟುಕೊಂಡು 'ಟೆಸ್ಟ್-ಟ್ರ್ಯಾಕ್-ಟ್ರೀಟ್ ಮತ್ತು ವ್ಯಾಕ್ಸಿನೇಷನ್' ಮೇಲೆ ಕೇಂದ್ರೀಕರಿಸಲು ಈ ಪತ್ರದಲ್ಲಿ ರಾಜ್ಯಗಳನ್ನು ತಿಳಿಸಲಾಗಿದೆ. ಮಾಸ್ಕ್ ಧರಿಸಲು, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಮತ್ತು ದೈಹಿಕ ಅಂತರವನ್ನು ಕಾಪಾಡಿಕೊಳ್ಳಲು ರಾಜ್ಯಗಳ ಜನತೆಗೆ ಮನವಿ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ರಾಜ್ಯಗಳಿಗೆ ಹೊರಗಡೆಯಿಂದ ಬರುವವರು ಜಾಗರೂಕರಾಗಿರಬೇಕು ಮತ್ತು ಕೋವಿಡ್ -19 ನಿರ್ವಹಣೆಗೆ ಎಲ್ಲಾ ಸಿದ್ಧತೆಗಳನ್ನು ರೆಡಿ ಇಟ್ಟುಕೊಳ್ಳಿ. ಕೇಂದ್ರ ಮತ್ತು ರಾಜ್ಯಗಳು ಕಳೆದ ಬಾರಿ ಕೊರೊನಾ ಪ್ರಕರಣಗಳ ಉಲ್ಬಣದ ಸಮಯದಲ್ಲಿ ಮಾಡಿದಂತೆ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕಾಗಿದೆ ಎಂದು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ : Covid-19 New Wave: ನಾಳೆಯಿಂದ ಬದಲಾಗಲಿದೆ ವಿಮಾನ ಪ್ರಯಾಣದ ನಿಯಮ

ಜನರ ಮೇಲೆ ನಿಗಾವಹಿಸಲು ಮತ್ತು ಪರೀಕ್ಷೆಯನ್ನು ಹೆಚ್ಚಿಸಲು, ಆಸ್ಪತ್ರೆಯ ಮೂಲಸೌಕರ್ಯಗಳನ್ನು ಸಿದ್ಧವಾಗಿರಿಸಲು ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸಲಹೆ ನೀಡಿದೆ. ಜೀನೋಮ್ ಅನುಕ್ರಮವನ್ನು ಹೆಚ್ಚಿಸುವತ್ತ ಗಮನಹರಿಸುವಂತೆ ಕೇಂದ್ರವು ರಾಜ್ಯಗಳಿಗೆ ಸಲಹೆ ನೀಡಿದೆ.

ಆರೋಗ್ಯ ಸಚಿವಾಲಯವು, ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜಾತ್ರೆ, ಮಾರುಕಟ್ಟೆ ಹೀಗೆ ಜನಸಂದಣಿಯನ್ನು ಪ್ರದೇಶಗಳನ್ನು  ನಿಯಂತ್ರಿಸಲು, ಈವೆಂಟ್ ಸಂಘಟಕರು, ರೆಸ್ಟೋರೆಂಟ್‌ಗಳು ಇತ್ಯಾದಿಗಳೊಂದಿಗೆ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದೆ.

ಇದನ್ನೂ ಓದಿ : Army Truck Accident : ಭೀಕರ ಸೇನಾ ಟ್ರಕ್‌ ಅಪಘಾತ.. 16 ಯೋಧರ ಸಾವು..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News