Mumbai-Goa Highway Accident: ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮಗು ಸೇರಿದಂತೆ 9 ಮಂದಿ ಮೃತ

Mumbai-Goa Highway Accident: ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಒಂಬತ್ತು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

Written by - Yashaswini V | Last Updated : Jan 19, 2023, 10:41 AM IST
  • ಬೆಳಗಿನ ಜಾವ 5 ಗಂಟೆ ಸುಮಾರಿಗೆ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದ ವಾಹನ ವಿರುದ್ಧ ದಿಕ್ಕಿನಲ್ಲಿ ಸಾಗಿ ಎದುರಿಗೆ ಬರುತ್ತಿದ್ದ ಎಕೋ ಕಾರಿಗೆ ಡಿಕ್ಕಿ ಹೊಡೆದಿದೆ.
  • ಮುಂಬೈ-ಗೋವಾ ಹೆದ್ದಾರಿಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ದುರ್ಘಟನೆಯಲ್ಲಿ ಐದು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
  • ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ತೆರಳುತ್ತಿದ್ದ ಕಾರು ಮುಂಬೈಗೆ ತೆರಳುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ರಾಯಗಢ ಪೊಲೀಸರು ತಿಳಿಸಿದ್ದಾರೆ.
Mumbai-Goa Highway Accident: ಮುಂಬೈ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮಗು ಸೇರಿದಂತೆ 9 ಮಂದಿ ಮೃತ  title=
Mumbai-Goa Highway accident

Mumbai-Goa Highway Accident: ಮುಂಬೈ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ಪ್ರಯಾಣಿಕನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ರಾಯಗಢ ಜಿಲ್ಲೆಯ ರೆಪೋಲಿ ಪ್ರದೇಶದ ಗೋವಾ-ಮುಂಬೈ ಹೆದ್ದಾರಿಯಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. 

ಮುಂಬೈ-ಗೋವಾ ಹೆದ್ದಾರಿಯಲ್ಲಿ  ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ದುರ್ಘಟನೆಯಲ್ಲಿ ಐದು ಪುರುಷರು, ಮೂವರು ಮಹಿಳೆಯರು ಮತ್ತು ಒಂದು ಮಗು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ರತ್ನಗಿರಿ ಜಿಲ್ಲೆಯ ಗುಹಾಗರ್‌ಗೆ ತೆರಳುತ್ತಿದ್ದ ಕಾರು ಮುಂಬೈಗೆ ತೆರಳುತ್ತಿದ್ದ  ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ರಾಯಗಢ ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ- ಇಯರ್‌ಫೋನ್‌ ಹಾಕಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿ, ಸ್ಥಳದಲ್ಲೇ ಸಾವು

ಬೆಳಗಿನ ಜಾವ 5 ಗಂಟೆ ಸುಮಾರಿಗೆ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದ ವಾಹನ ವಿರುದ್ಧ ದಿಕ್ಕಿನಲ್ಲಿ ಸಾಗಿ ಎದುರಿಗೆ ಬರುತ್ತಿದ್ದ ಎಕೋ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದರಿಂದ ಅದರಲ್ಲಿದ್ದವರೆಲ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ- ಬೈಕ್‌ ಮೇಲೆ ಪ್ರೇಮಿಗಳ ಸರಸ ಸಲ್ಲಾಪ.. ಪೊಲೀಸ್‌ ಶಾಕ್‌ಗೆ ಬೆಚ್ಚಿ ಬಿದ್ದ ಪ್ರೇಮಿ..!

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಹಾರ ಕಾರ್ಯಾಚರಣೆ ಮುಂದುವರೆಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News