ಮೋದಿ ಸರ್ಕಾರದ ವಿರುದ್ಧ ಇಂದು ಅವಿಶ್ವಾಸ ನಿರ್ಣಯ ಮಂಡನೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಇಂದು ಲೋಕಸಭೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡಿಸಲಿವೆ.

Last Updated : Mar 19, 2018, 10:17 AM IST
ಮೋದಿ ಸರ್ಕಾರದ ವಿರುದ್ಧ ಇಂದು ಅವಿಶ್ವಾಸ ನಿರ್ಣಯ ಮಂಡನೆ title=

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಇಂದು ಲೋಕಸಭೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡಿಸಲಿವೆ.

ಎನ್ದಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವೈಎಸ್​ಆರ್ ಕಾಂಗ್ರೆಸ್ ಪಕ್ಷದ ವೈ.ವಿ.ಸುಬ್ಬಾ ರೆಡ್ಡಿ ಲೋಕಸಭೆ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳಿಂದ ಬೆಂಬಲ ವ್ಯಕ್ತವಾಗಿದೆ. ಈಗಾಗಲೇ ತೆಲುಗುದೇಶಂ ಪಕ್ಷ ವೈಎಸ್‌ಆರ್ಗೆ ಬೆನಲಿಸುವುದಾಗಿ ಹೇಳಿದ್ದು, ಕಾಂಗ್ರೆಸ್ ಕೂಡ ಬೆಂಬಲ ವ್ಯಕ್ತಪಡಿಸಿದೆ. ಇದರ ಜೊತೆಗೆ ತೃಣಮೂಲ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಸಮಾಜವಾದಿ ಪಕ್ಷಗಳು ಸಹ ಅವಿಶ್ವಾಸ ನಿರ್ಣಯವನ್ನು ಬೆಂಬಲಿಸುವ ತೀರ್ಮಾನಕ್ಕೆ ಬಂದಿವೆ.

ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಿರುದ್ಧ ಮೊದಲ ಬಾರಿಗೆ ಇತರ ಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾಗಿವೆ. 

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸದ ಕಾರಣ ಅವರು ಎನ್ ಡಿಎಯಿಂದ ಮೈತ್ರಿ ಕಡಿದುಕೊಂಡ ಬೆನ್ನಲ್ಲೇ ವೈಎಸ್ಆರ್ ಕಾಂಗ್ರೆಸ್ ಗೊತ್ತುವಳಿ ಮಂಡಿಸಲು ಮುಂದಾಗಿದೆ. 

Trending News