ಉನ್ನಾವೋ ಪ್ರಕರಣ: ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ,ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ-ಯೋಗಿ ಆದಿತ್ಯನಾಥ

    

Last Updated : Apr 13, 2018, 05:36 PM IST
ಉನ್ನಾವೋ ಪ್ರಕರಣ: ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ,ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ-ಯೋಗಿ ಆದಿತ್ಯನಾಥ   title=

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

ಈ ಪ್ರಕರಣದಲ್ಲಿ  ಸರಕಾರವು ಯಾವುದೇ ರಾಜಿ  ಮಾಡಿಕೊಳ್ಳುವುದಿಲ್ಲ ಎಂದ ಅವರು ಈಗಾಗಲೇ "ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದೆ. ನಮ್ಮ ಸರ್ಕಾರ ಈ ವಿಷಯದಲ್ಲಿ  ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ, ಆರೋಪಿಯು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಸಹಿತ  ತಪ್ಪಿಸಿಕೊಳ್ಳಲು ಸಾದ್ಯವಿಲ್ಲ ಎಂದು ಆದಿತ್ಯನಾಥ್ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥರವರ ಹೇಳಿಕೆಯು ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕನೊಬ್ಬನು ಅತ್ಯಾಚಾರ ಆರೋಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ಅವರನ್ನು ಬಂಧಿಸಲು ನಿರ್ಧರಿಸಿದ್ದಾರೆ, ಆದರೆ 'ಪ್ರಮುಖ ವ್ಯಕ್ತಿ'ಯ ಮಧ್ಯಸ್ಥಿಕೆಯ ನಂತರ ಅವರ ನಿರ್ಧಾರವನ್ನು ಬದಲಾಯಿಸಲಾಗಿದೆ ಎಂದ ನಂತರ ಮುಖ್ಯಮಂತ್ರಿಗಳು ಈ ಬಹಿರಂಗ ಹೇಳಿಕೆಯನ್ನು ನೀಡಿದ್ದಾರೆ.

 

Trending News