ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ: ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ

ಭಾರತ ಮತ್ತು ಪಾಕಿಸ್ತಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಗಳ ನಡುವೆ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಹೊರತಾಗಿ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಿ ಕಾಶ್ಮೀರ ಸಮಸ್ಯೆಯು ಯಾವುದೇ ಮೂರನೇ ಶಕ್ತಿಯ ಹಸ್ತಕ್ಷೇಪವನ್ನು ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.

Last Updated : Aug 26, 2019, 04:53 PM IST
ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ: ಡೊನಾಲ್ಡ್ ಟ್ರಂಪ್‌ಗೆ ಪ್ರಧಾನಿ ಮೋದಿ title=
Photo Courtesy: ANI

ಬಿಯರಿಟ್ಜ್: ಕಾಶ್ಮೀರ ವಿಷಯವು ಭಾರತ ಮತ್ತು ಪಾಕಿಸ್ತಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಯಾಗಿದ್ದು, ಈ ವಿಚಾರವಾಗಿ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಹೊರತಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಶ್ಮೀರ ಸಮಸ್ಯೆಯು ಯಾವುದೇ ಮೂರನೇ ಶಕ್ತಿಯ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎಂದು ಸ್ಪಷ್ಟಪಡಿವಾಗಿ ಹೇಳಿದ್ದಾರೆ.

"ಭಾರತ ಮತ್ತು ಪಾಕಿಸ್ತಾನವು ಹಲವಾರು ದ್ವಿಪಕ್ಷೀಯ ಸಮಸ್ಯೆಗಳನ್ನು ಹೊಂದಿವೆ. ಉಭಯ ದೇಶಗಳು ಕುಳಿತು ದ್ವಿಪಕ್ಷೀಯ ಮಾತುಕತೆ ನಡೆಸುವ ಮೂಲಕ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಭಾರತ ಮತ್ತು ಪಾಕಿಸ್ತಾನ ಬಡತನ ಮತ್ತು ಶಿಕ್ಷಣದ ಕೊರತೆಯ ವಿರುದ್ಧ ಹೋರಾಡಬೇಕಾಗಿದೆ. ಎರಡೂ ರಾಷ್ಟ್ರಗಳ ಜನರ ಉನ್ನತಿಗಾಗಿ ಕೆಲಸ ಮಾಡಬೇಕಾಗಿದೆ ಪ್ರಧಾನಿ ಮೋದಿ ಹೇಳಿದರು.

ಜಪಾನ್‌ನ ಒಸಾಕಾದಲ್ಲಿ ನಡೆದ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾದಾಗ ಕಾಶ್ಮೀರಕ್ಕೆ ಪರಿಹಾರ ಕಂಡುಕೊಳ್ಳಲು ಪಾಕಿಸ್ತಾನದೊಂದಿಗೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷ ಟ್ರಂಪ್ ಹೇಳಿಕೊಂಡ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಂದಿದೆ.

"ಇದು ನನ್ನ ಸ್ನೇಹಿತ ಮತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದೊಂದಿಗಿನ ಮಹತ್ವದ ಸಭೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ಅವರು (ಟ್ರಂಪ್) ನನ್ನನ್ನು ಚುನಾವಣಾ ಗೆಲುವಿಗೆ ಅಭಿನಂದಿಸಿದರು. ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡಬಹುದು, ನಮ್ಮಲ್ಲಿ ಸಾಮಾನ್ಯ ಮೌಲ್ಯಗಳಿವೆ. ಆರ್ಥಿಕ ಕ್ಷೇತ್ರದ ಪ್ರಗತಿಗೆ ಸಂಬಂಧಿಸಿದಂತೆ ನಾವು ನಿರಂತರ ಮಾತುಕತೆ ನಡೆಸುತ್ತಿದ್ದೇವೆ ಮತ್ತು ಅವರ (ಯುಎಸ್) ಸಲಹೆಗಳನ್ನು ಸೂಕ್ತವಾಗಿ ಪರಿಗಣಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು.

Trending News