Odisha Coromandel Express Accident: ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ನ ನಾಲ್ಕು ಬೋಗಿಗಳು ಹಳಿತಪ್ಪಿದ ಪರಿಣಾಮ ಎದುರು ಮಾರ್ಗದಿಂದ ಬರುತ್ತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 233ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಇನ್ನೆರಡು ವಾರಗಳಲ್ಲಿ ಈ ರಾಶಿಯವರ ಜಾತಕದಲ್ಲಿ ತ್ರಿಕೋನ ರಾಜಯೋಗ ! ಹರಿದು ಬರುವುದು ಧನ ಸಂಪತ್ತು
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ. ಎನ್ ಡಿ ಆರ್ ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿವೆ. ಕೋರಮಂಡಲ್ ಎಕ್ಸ್ ಪ್ರೆಸ್ ಕೋಲ್ಕತ್ತಾ ಬಳಿಯ ಶಾಲಿಮಾರ್ ನಿಲ್ದಾಣದಿಂದ ಚೆನ್ನೈ ಸೆಂಟ್ರಲ್ ಗೆ ತೆರಳುತ್ತಿದ್ದಾಗ ರಾತ್ರಿ 7.20 ರ ಸುಮಾರಿಗೆ ಬಹಂಗಾ ಬಜಾರ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.
ಈ ಘಟನೆ ಕುರಿತು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಮಾತನಾಡಿ, ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ಬಾಲಸೋರ್ ಬಳಿ ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದೆ. ಈ ವೇಳೆ ಬೋಗಿಗಳು ಹಳಿ ಮೇಲೆ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಆ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ, ಇದರಿಂದಾಗಿ ಅದರ 3-4 ಬೋಗಿಗಳು ಸಹ ಹಳಿತಪ್ಪಿವೆ.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ಸ್ಥಳಕ್ಕೆ ತೆರಳಿವೆ ಎಂದು ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಪ್ರಕಟಣೆ ತಿಳಿಸಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯ ಜನರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆಯ (ODRAF) ನಾಲ್ಕು ಕಾಲಂಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NDRF) ಮೂರು ಕಾಲಂಗಳು ಮತ್ತು 60 ಆಂಬ್ಯುಲೆನ್ಸ್‌ಗಳು ಗಾಯಾಳುಗಳನ್ನು ರಕ್ಷಿಸುವಲ್ಲಿ ನಿರತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಮತ್ತು ರೈಲ್ವೇ ಸಹಾಯವಾಣಿಯನ್ನು ಆರಂಭಿಸಿದೆ.
ಇದನ್ನೂ ಓದಿ: ಈ ರಾಶಿಯವರ ಜಾತಕದಲ್ಲಿ ಮಹಾ ರಾಜಯೋಗ: ಬಾಳು ಬಂಗಾರವಾಗುವ ಸುವರ್ಣ ಸಮಯ ಬಂದೇಬಿಡ್ತು!
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲುಗಳು ಹಳಿ ತಪ್ಪಲು ಕಾರಣವೇನು ಎಂಬುದನ್ನು ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. "ಅಪಘಾತವು ದುರದೃಷ್ಟಕರ. ಘಟನೆ ಬಗ್ಗೆ ಸಚಿವಾಲಯಕ್ಕೆ ವರದಿ ಬಂದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು" ಎಂದು ಸಚಿವರು ಹೇಳಿದ್ದಾರೆ. ಇನ್ನು ರೈಲ್ವೆ ಸಚಿವಾಲಯವು ಪರಿಹಾರವನ್ನು ಘೋಷಿಸಿದೆ. ಮೃತರ ಸಂಬಂಧಿಕರಿಗೆ 10 ಲಕ್ಷ ರೂ. ತೀವ್ರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಸಣ್ಣಪುಟ್ಟ ಗಾಯಗಳಾಗಿರುವವರಿಗೆ 50,000 ರೂ. ಎಂದು ಹೇಳಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.