ಉನ್ನಾವೋ ಪ್ರಕರಣ: ಸಂತ್ರಸ್ತೆಯ ಕುಟುಂಬಸ್ಥರಿಗೆ 25 ಲಕ್ಷ ರೂ.ಪರಿಹಾರ ಘೋಷಿಸಿದ ಯೋಗಿ ಸರ್ಕಾರ

ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವೆಯಾಗಿರುವ ಕಮಲಾ ರಾಣಿ ವರುಣ್ ಉನ್ನಾವೋ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಘೋಷಿಸಿದ್ದಾರೆ.

Last Updated : Dec 7, 2019, 07:27 PM IST
ಉನ್ನಾವೋ ಪ್ರಕರಣ: ಸಂತ್ರಸ್ತೆಯ ಕುಟುಂಬಸ್ಥರಿಗೆ 25 ಲಕ್ಷ ರೂ.ಪರಿಹಾರ ಘೋಷಿಸಿದ ಯೋಗಿ ಸರ್ಕಾರ title=

ಉನ್ನಾವೋ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ಕುಟುಂಬಸ್ಥರಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ 25 ಲಕ್ಷ ಪರಿಹಾರ ಘೋಷಿಸಿದೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವೆಯಾಗಿರುವ ಕಮಲಾ ರಾಣಿ ವರುಣ್ ಉನ್ನಾವೋ ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಬಳಿಕ ಮಾತನಾಡಿರುವ ಕ್ಯಾಬಿನೆಟ್ ಸಚಿವೆ, ಈ ಪ್ರಕರಣದಲ್ಲಿ ತ್ವರಿತಗತಿ ನ್ಯಾಯಾಲಯ ಸ್ಥಾಪಿಸುವುದಾಗಿ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದು, ಸಂತ್ರಸ್ಥೆಯ ಕುಟುಂಬ ಸದಸ್ಯರಿಗೆ ಒಂದು ಪ್ರಧಾನಿ ಆವಾಸ್ ಕೂಡ ನೀಡಲಾಗುವುದು ಎಂದು ಕಮಲಾ ರಾಣಿ ಘೋಷಿಸಿದ್ದಾರೆ.

ಶನಿವಾರ ಸಂತ್ರಸ್ಥೆಯ ಮನೆಗೆ ಭೇಟಿ ನೀಡಿರುವ ಯೋಗಿ ಸರ್ಕಾರದ ಕ್ಯಾಬಿನೆಟ್ ಸಚಿವೆ ಕಮಲಾ ರಾಣಿ, ಸ್ವಾಮಿ ಪ್ರಸಾದ್ ಮೌರ್ಯ ಹಾಗೂ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ತಮ್ಮ ಕೈಲಾದ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಗುರುವಾರ ದುಷ್ಕರ್ಮಿಗಳಿಂದ ಸಜೀವವಾಗಿ ದಹಿಸಲ್ಪಟ್ಟ ಸಂತ್ರಸ್ತೆಯನ್ನು ಲಖನೌನಲ್ಲಿರುವ ಟ್ರಾಮಾ ಸೆಂಟರ್ ಗೆ ಭರ್ತಿ ಮಾಡಲಾಗಿತ್ತು . ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವಳನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ರೆಫರ್ ಮಾಡಲಾಗಿತ್ತು. ಅಲ್ಲಿಯೂ ಸಹ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ 11.40ರ ಸುಮಾರಿಗೆ ಸಂತ್ರಸ್ಥ ಯುವತಿ ಸಾವಿಗೆ ಶರಣಾಗಿದ್ದಾಳೆ.

Trending News