ಕಾವೇರಿ ನಿರ್ವಹಣಾ ಮಂಡಳಿಗೆ ಆಗ್ರಹಿಸಿ ತ.ನಾ ಸಿಎಂ, ಡಿಸಿಎಂ ಉಪವಾಸ ಸತ್ಯಾಗ್ರಹ

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ರಿಂದ ಉಪವಾಸ ಸತ್ಯಾಗ್ರಹ.

Last Updated : Apr 3, 2018, 12:58 PM IST
ಕಾವೇರಿ ನಿರ್ವಹಣಾ ಮಂಡಳಿಗೆ ಆಗ್ರಹಿಸಿ ತ.ನಾ ಸಿಎಂ, ಡಿಸಿಎಂ ಉಪವಾಸ ಸತ್ಯಾಗ್ರಹ title=
Pic: ANI

ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿಗೆ ಆಗ್ರಹಿಸಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದೆ. ಅದಕ್ಕೆ ಪುಷ್ಠಿ ನೀಡುವಂತೆ ಇಂದು ಬೆಳಿಗ್ಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಮಿಳುನಾಡಿನ ಸಿಎಂ ಮತ್ತು ಡಿಸಿಎಂ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ.

ಏತನ್ಮಧ್ಯೆ, ಎಐಎಡಿಎಂಕೆ ಸಂಸದರು ಶೀಘ್ರವೇ ನಿರ್ವಹಣಾ ಮಂಡಳಿ ರಚಿಸುವಂತೆ ಒತ್ತಾಯಿಸಿ ಸಂಸತ್ ಆವರಣದಲ್ಲಿ ಪ್ರತಿಭಟನೆ ಕೈಗೊಂಡರು.

ಇನ್ನು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಾಪಾರಿ ಸಂಘಗಳು ಕರೆದಿರುವ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೊಯಮತ್ತೂರಿನಲ್ಲಿ ಮಾರುಕಟ್ಟೆ ಮುಚ್ಚಲಾಯಿತು.

Trending News