ಶ್ರೀನಗರ: ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಕಾಳಗದಲ್ಲಿ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಎನ್ಕೌಂಟರ್ನಲ್ಲಿ ಓರ್ವ ವಿಶೇಷ ಪೊಲೀಸ್ ಅಧಿಕಾರಿ (ಎಸ್ಪಿಒ) ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
#UPDATE Baramulla encounter: One Special Police Officer (SPO) lost his life in the encounter, one terrorist has been gunned down. The encounter has concluded. #JammuAndKashmir https://t.co/SzhyNCvob1
— ANI (@ANI) August 21, 2019
ಮೂಲಗಳ ಪ್ರಕಾರ, ಪ್ರದೇಶದಲ್ಲಿ ಎರಡರಿಂದ ಮೂರು ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಜಮ್ಮು ಕಾಶ್ಮೀರ ಪೊಲೀಸರು, ಸೇನೆ ಮತ್ತು ಭದ್ರತಾ ಪಡೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದ್ದಂತೆ ಉಗ್ರರು ಗುಂಡಿನ ಚಕಮಕಿಯಲ್ಲಿ ತೊಡಗಿದ್ದರು.
ರಾತ್ರಿಯಿಡೀ ಎರಡೂ ಬದಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು ಆ ಸಂದರ್ಭದಲ್ಲಿ ಎಸ್ಪಿಒ ಹುತಾತ್ಮರಾಗಿದ್ದು, ಓರ್ವ ಉಗ್ರನನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಳೆಯ ಬಾರಾಮುಲ್ಲಾದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಎನ್ಕೌಂಟರ್ ಪ್ರಾರಂಭವಾಯಿತು. ಸೇನೆಯ ಮೂಲಗಳ ಪ್ರಕಾರ, ಇಡೀ ಪ್ರದೇಶವನ್ನು ಸುತ್ತುವರಿಯಲಾಯಿತು.
ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಆಗಸ್ಟ್ 5 ರಂದು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇದು ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಮೊದಲ ಮುಖಾಮುಖಿಯಾಗಿದೆ.
ಆಗಸ್ಟ್ 5 ರಿಂದ ಕಾಶ್ಮೀರ ಕಣಿವೆಯು ಕಲ್ಲು ತೂರಾಟ ಮತ್ತು ಪ್ರತಿಭಟನೆಯ ದೊಡ್ಡ ಶಾಂತಿ ಕದಲುವ ಘಟನೆಗಳು ಕಡಿಮೆಯಾಗಿವೆ. ಆದಾಗ್ಯೂ, ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನವು ಕದನ ವಿರಾಮ ಉಲ್ಲಂಘನೆಗಳ ಸಂಖ್ಯೆ ಹೆಚ್ಚಾಗಿದೆ. ಬಾರಾಮುಲ್ಲಾ ಶ್ರೀನಗರದಿಂದ 54 ಕಿ.ಮೀ ದೂರದಲ್ಲಿದೆ.