ಸೋಮವಾರದಂದು ದಿಲ್ಲಿಯಲ್ಲಿ ಕೇಂದ್ರದ ವಿರುದ್ದ ಪ್ರತಿಪಕ್ಷಗಳ ದಂಗಲ್

ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಮುಂದಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Last Updated : Feb 9, 2019, 12:46 PM IST
 ಸೋಮವಾರದಂದು ದಿಲ್ಲಿಯಲ್ಲಿ ಕೇಂದ್ರದ ವಿರುದ್ದ ಪ್ರತಿಪಕ್ಷಗಳ ದಂಗಲ್ title=

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಾಗೂ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸಲು ಮುಂದಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಈಗ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಟಕ್ಕರ್ ನೀಡಲು ಮುಂದಾಗಿರುವ ಮಮತಾ ಈಗ ಪ್ರತಿಪಕ್ಷಗಳನ್ನು ಒಗ್ಗೂಡಿಸಿ ಪ್ರತಿಭಟನೆ ನಡೆಸಲಿದ್ದಾರೆ ಎನ್ನಲಾಗಿದೆ.ಸೋಮವಾರದಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೆಹಲಿಯಲ್ಲಿರುವ ಆಂಧ್ರ ಭವನದ ಎದುರುಗಡೆ ಆಂಧ್ರದ ವಿಶೇಷ ಸ್ಥಾನಕ್ಕಾಗಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಿದ್ದಾರೆ.ಇದಕ್ಕೆ ಪ್ರಜಾಪ್ರಭುತ್ವ ಉಳಿಸಿ ಎನ್ನುವ ವೇದಿಕೆಯಡಿ ಸುಮಾರು 22 ಪ್ರತಿಪಕ್ಷದ ಸದಸ್ಯರು ಕೂಡ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ.

ಇದಾದ ನಂತರ ಫೆಬ್ರುವರಿ 13 ಅಥವಾ 14 ರಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಕೊಲ್ಕತ್ತಾದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯ ಮುಂದುವರೆದ ಭಾಗವಾಗಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.ಈ ಪ್ರತಿಭಟನೆಯ ಮೂಲಕ ಈಗ ಮಮತಾ ಬ್ಯಾನರ್ಜೀ ಮತ್ತು ಚಂದ್ರಬಾಬು ನಾಯ್ಡು ಬಿಜೆಪಿ ಸರ್ಕಾರದ ವಿರುದ್ದ ರಣಕಹಳೆ ಊದಲಿದ್ದಾರೆ ಎಂದು ತಿಳಿದುಬಂದಿದೆ.

 

Trending News