ಕಾಶ್ಮೀರದಲ್ಲಿ ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

 ಪಾಕಿಸ್ತಾನ ಪಡೆಗಳು ಶನಿವಾರದಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿವೆ.

Last Updated : Nov 2, 2019, 12:06 PM IST
ಕಾಶ್ಮೀರದಲ್ಲಿ ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ  title=
ಸಾಂದರ್ಭಿಕ ಚಿತ್ರ

ನವದೆಹಲಿ:  ಪಾಕಿಸ್ತಾನ ಪಡೆಗಳು ಶನಿವಾರದಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಕದನ ವಿರಾಮ ಉಲ್ಲಂಘನೆ ಮಾಡಿವೆ.

ಇತ್ತೀಚಿಗಿನ ವರದಿಗಳ ಪ್ರಕಾರ ಪಾಕಿಸ್ತಾನದ ಪಡೆಗಳು ಸಣ್ಣ ಶಸ್ತ್ರಾಸ್ತ್ರಗಳನ್ನು ಬಳಸಿ ಮತ್ತು ಭಾರತದ ಸ್ಥಾನಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿವೆ. ಈ ದಾಳಿ ಸುಮಾರು ಬೆಳಿಗ್ಗೆ 11 ಗಂಟೆಗೆ ನಡೆದಿದೆ ಎನ್ನಲಾಗಿದೆ.

ಪಾಕಿಸ್ತಾನ ಪಡೆಗಳ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆಯು ಸೂಕ್ತ ಉತ್ತರ ನೀಡುತ್ತಿದೆ ಎಂದು ವರದಿಗಳು ತಿಳಿಸಿವೆ. 
 

Trending News