ಪಾಟ್ನಾ: ಅಂತರ್ಜಲ ಸಂರಕ್ಷಣೆಗಾಗಿ ಹೊಸ ಕಾನೂನು ರೂಪಿಸಲು ಸರ್ಕಾರದ ಚಿಂತನೆ

ಅಂತರ್ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಹೊಸ ಕಾನೂನು ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಬಿಹಾರ ಆರೋಗ್ಯ ಸಚಿವ ವಿನೋದ್ ಕುಮಾರ್ ಜಾ ಬುಧವಾರ ಹೇಳಿದ್ದಾರೆ.  

Last Updated : Jul 10, 2019, 02:48 PM IST
ಪಾಟ್ನಾ: ಅಂತರ್ಜಲ ಸಂರಕ್ಷಣೆಗಾಗಿ ಹೊಸ ಕಾನೂನು ರೂಪಿಸಲು ಸರ್ಕಾರದ ಚಿಂತನೆ title=
Representational Image

ಪಾಟ್ನಾ: ಈ ವರ್ಷದ ಬೇಸಿಗೆಯಲ್ಲಿ ಸೃಷ್ಟಿಯಾದ ಕುಡಿಯುವ ನೀರಿನ ಸಮಸ್ಯೆಯಿಂದ ಬಿಹಾರ ಸರ್ಕಾರ ಪಾಠ  ಕಲಿತಿದ್ದು, ರಾಜ್ಯದಲ್ಲಿ ನೀರಿನ ಸಂರಕ್ಷಣೆಗೆ ವಿಶೇಷ ಗಮನ ಹರಿಸಲು ಮುಂದಾಗಿದೆ. ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ನೀರಿನ ಸಂರಕ್ಷಣೆ ಬಗ್ಗೆ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರ್ಕಾರ, ನೀರನ್ನು ವ್ಯರ್ಥ ಮಾಡದಿರುವ ಬಗ್ಗೆ ಜನರಿಗೆ ಅರಿವು ಮೂಡಿಸಲು ಅಭಿಯಾನ ಪ್ರಾರಂಭಿಸಿ. 

ನೀರಿನ ದುರುಪಯೋಗವನ್ನು ತಡೆಗಟ್ಟಲು ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಅಂತರ್ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಹೊಸ ಕಾನೂನು ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಬಿಹಾರ ಆರೋಗ್ಯ ಸಚಿವ ವಿನೋದ್ ಕುಮಾರ್ ಜಾ ಬುಧವಾರ ಹೇಳಿದ್ದಾರೆ. 

ಮೂಲಗಳ ಪ್ರಕಾರ, ಹೊಸ ಕಾನೂನಿನ ಪ್ರಕಾರ, ನೀರಿನ ಬಳಕೆಯನ್ನು ನಿಯಂತ್ರಿಸಲು ನೀರಿನ ಸಂರಕ್ಷಣಾ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು, ಇದು ಅಂತರ್ಜಲ ಮಟ್ಟವನ್ನು ಕಾಪಾಡಲು ಸಹಕಾರಿಯಾಗುತ್ತದೆ ಎಂದು ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಕಾನೂನು ಜಾರಿಗೊಳಿಸುವ ಮೊದಲು ಜನಸಾಮಾನ್ಯರಿಂದ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಲಾಗಿದೆ. 

ಈಗಾಗಲೇ ಒಂದು ವರ್ಷದೊಳಗೆ ಸರ್ಕಾರಿ ಕಟ್ಟಡಗಳಲ್ಲಿ ನೀರಿನ ಸಂರಕ್ಷಣೆ ವ್ಯವಸ್ಥೆ ಮಾಡುವಂತೆ ಸರ್ಕಾರ ಇಲಾಖೆಗಳಿಗೆ ಸೂಚನೆ ನೀಡಿದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವ ಬಗ್ಗೆ ಮುಖ್ಯ ಕಾರ್ಯದರ್ಶಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇದರಲ್ಲಿ ನೀರಿನ ಸಂರಕ್ಷಣೆ ಸೂಚನೆಗಳನ್ನು ನೀಡಲಾಗಿದೆ ಎಂಬುದು ಗಮನಾರ್ಹವಾಗಿದೆ.

ಈ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ವಿಭಾಗದ ಎಲ್ಲ ಎಂಜಿನಿಯರ್‌ಗಳಿಗೆ ಪತ್ರ ಬರೆಯಲು ಸೂಚನೆ ನೀಡಲಾಗಿದೆ. ಇತ್ತೀಚಿನ ಸರ್ಕಾರಿ ಕಟ್ಟಡಗಳಲ್ಲಿ ನೀರಿನ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ಹೇಳುತ್ತವೆ. ಆದರೆ ಹಳೆಯ ಸರ್ಕಾರಿ ಕಟ್ಟಡಗಳಲ್ಲಿ ಅಂತಹ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
 

Trending News