ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆ ಮೆಟ್ರೋ ನಗರಗಳಲ್ಲಿ ಎಷ್ಟಿದೆ?

ಬುಧವಾರ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 74.42 ರೂ. ಮತ್ತು ಡೀಸೆಲ್ ಬೆಲೆ 67.63 ರೂ.  

Last Updated : Aug 14, 2019, 08:03 AM IST
ಇಂದಿನ ಪೆಟ್ರೋಲ್-ಡೀಸೆಲ್‌ ಬೆಲೆ ಮೆಟ್ರೋ ನಗರಗಳಲ್ಲಿ ಎಷ್ಟಿದೆ? title=

ನವದೆಹಲಿ: ಸತತ ಐದು ದಿನಗಳವರೆಗೆ ಕಡಿತಗೊಂಡಿದ್ದ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರು ದಿನಗಳಿಂದ ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಆಗಸ್ಟ್ನಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ದರ ಎಂದಿಗೂ ಹೆಚ್ಚಿಲ್ಲ. ಈ ತಿಂಗಳಲ್ಲಿ ಇಲ್ಲಿಯವರೆಗೆ, ಪೆಟ್ರೋಲ್ ಪ್ರತಿ ಲೀಟರ್‌ಗೆ ಸುಮಾರು 90 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 60 ಪೈಸೆಗಳಷ್ಟು ಅಗ್ಗವಾಗಿದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಅಗ್ಗವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲಬೆಲೆಯಲ್ಲಿ ಏರಿಳಿತದ ಮಧ್ಯೆ, ಇಂದು ಪೆಟ್ರೋಲ್ ಬೆಲೆ ಸ್ಥಿರವಾಗಿದೆ.

ಇದರೊಂದಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 71.99 ರೂ., ಡೀಸೆಲ್ ಬೆಲೆ 65.43 ರೂ. ಇದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್

(ರೂ./ಲೀ)

ಡೀಸೆಲ್

(ರೂ./ಲೀ)

ದೆಹಲಿ 71.99 65.43
ಕೊಲ್ಕತ್ತಾ 74.69 67.81
ಮುಂಬೈ 77.65 68.60
ಚೆನ್ನೈ 74.78 69.13
ಬೆಂಗಳೂರು 74.42 67.63
ಹೈದರಾಬಾದ್ 76.50 71.30
ತಿರುವನಂತಪುರಂ 75.34 70.42

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News