ಎಂಟು ದಿನಗಳ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.

Last Updated : Sep 25, 2019, 09:06 AM IST
ಎಂಟು ದಿನಗಳ ಬಳಿಕ ಪೆಟ್ರೋಲ್-ಡೀಸೆಲ್ ಬೆಲೆ ಸ್ಥಿರ title=

ನವದೆಹಲಿ: ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಸತತ ಎಂಟು ದಿನಗಳ ಕಾಲ ಏರಿಕೆಯಾಗಿದ್ದ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಂದು ಯಾವ ಬದಲಾವಣೆಯೂ ಆಗಿಲ್ಲ. ಮಂಗಳವಾರ ಬೆಳಿಗ್ಗೆ ಪೆಟ್ರೋಲ್ ದರ ಲೀಟರ್‌ಗೆ 22 ಪೈಸೆ ಏರಿಕೆಯಾಗಿದ್ದು ರಾಷ್ಟ್ರ ರಾಜಧಾನಿಯಲ್ಲಿ ಇದರ ಬೆಲೆ 74.13 ರೂ. ತಲುಪಿದ್ದರೆ, ಡೀಸೆಲ್ ಲೀಟರ್‌ಗೆ 14 ಪೈಸೆ ಏರಿಕೆ ಕಂಡು 67.07 ರೂ.ಗೆ ತಲುಪಿತ್ತು. ಬುಧವಾರವೂ ಕೂಡ ಪೆಟ್ರೋಲ್-ಡೀಸೆಲ್ ಇದೇ ಬೆಲೆ ಕಾಯ್ದುಕೊಂಡಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 76.67 ರೂ. ಮತ್ತು ಡೀಸೆಲ್ ಬೆಲೆ 69.36 ರೂ. ಆಗಿದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್ 

(ರೂ./ಲೀ)

ಡೀಸೆಲ್ 

(ರೂ./ಲೀ)

ದೆಹಲಿ 74.13 67.07
ಕೊಲ್ಕತ್ತಾ 76.82 69.49
ಮುಂಬೈ 79.79 70.37
ಚೆನ್ನೈ 77.07 70.92
ಬೆಂಗಳೂರು 76.67 69.36
ಹೈದರಾಬಾದ್ 78.80 73.11
ತಿರುವನಂತಪುರಂ 77.56 72.17

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News