ನಾಲ್ಕು ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ  71.91 ರೂ., ಡೀಸೆಲ್ ಬೆಲೆ 65.26 ರೂ. ಇದೆ.

Last Updated : Aug 18, 2019, 10:14 AM IST
ನಾಲ್ಕು ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ! title=

ನವದೆಹಲಿ: ದೇಶಾದ್ಯಂತ ಸತತ ನಾಲ್ಕು ದಿನಗಳ ಏರಿಕೆ ಬಳಿಕ ಭಾನುವಾರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿಇಳಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ 8 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್ ಗೆ 12 ಪೈಸೆಗಳಷ್ಟು ಇಳಿಕೆಯಾಗಿದೆ. 

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ  71.91 ರೂ., ಡೀಸೆಲ್ ಬೆಲೆ 65.26 ರೂ. ಇದೆ.

ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದೆ. ಈ ಪರಿಷ್ಕೃತ ದರ ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ. 

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಈ ಕೆಳಕಂಡಂತಿದೆ

ನಗರಗಳು

ಪೆಟ್ರೋಲ್ (ರೂ./ಲೀ)

ಡೀಸೆಲ್ (ರೂ./ಲೀ)

ದೆಹಲಿ 71.91 65.26
ಕೊಲ್ಕತ್ತಾ 74.61 67.64
ಮುಂಬೈ 77.57 68.42
ಚೆನ್ನೈ 74.69 69.95
ಬೆಂಗಳೂರು 74.34 67.46
ಹೈದರಾಬಾದ್ 76.42 71.12
ತಿರುವನಂತಪುರಂ 75.07 70.06

Trending News