PM Gati Shakti Yojana: ಶೀಘ್ರದಲ್ಲಿಯೇ ಪ್ರಧಾನಿ ಮೋದಿಯಿಂದ 'ಗತಿ ಶಕ್ತಿ ಯೋಜನೆ'ಗೆ ಚಾಲನೆ, ಏನಿದರ ವಿಶೇಷತೆ?

PM Gati Shakti Yojana: ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿ ಹೊಂದಲಾಗಿದೆ. ಈ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ (India's Master Plan) ಮತ್ತು ಮೂಲಸೌಕರ್ಯದ (Basic Infrastructure) ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ.

Written by - Nitin Tabib | Last Updated : Oct 11, 2021, 02:49 PM IST
  • ಶೀಘ್ರದಲ್ಲಿಯೇ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ.
  • ನಿರುದ್ಯೋಗಿ ಯುವಕರಿಗೆ ಉದ್ಯೋಗವಕಾಶ ಒದಗಿಸುವ ಗುರಿ.
  • ಈ ಯೋಜನೆಗೆ 100 ಲಕ್ಷ ಕೋಟಿ ರೂ ವೆಚ್ಚ ಅಮಾದಲಾಗುವುದು
PM Gati Shakti Yojana: ಶೀಘ್ರದಲ್ಲಿಯೇ ಪ್ರಧಾನಿ ಮೋದಿಯಿಂದ 'ಗತಿ ಶಕ್ತಿ ಯೋಜನೆ'ಗೆ ಚಾಲನೆ, ಏನಿದರ ವಿಶೇಷತೆ? title=
PM Gati Shakti Yojana Highlights (File Photo)

PM Gati Shakti Yojana: ಕೊರೊನಾ ಮಹಾಮಾರಿಯ ಕಾರಣ ಹಳಿ ತಪ್ಪಿದ್ದ ದೇಶದ ಆರ್ಥಿಕತೆ ಮತ್ತೆ ನಿಧಾನಗತಿಗೆ ಹಳಿಗೆ ಮರಳುತ್ತಿದೆ. ಅದಕ್ಕೆ ಮತ್ತಷ್ಟು ಉತ್ತೇಜನ ನೀಡಲು, ಹೊಸ ಯೋಜನೆಗಳನ್ನು ನಿರಂತರವಾಗಿ ಆರಂಭಿಸಲಾಗುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಈ ವರ್ಷ ಆಗಸ್ಟ್ 15 ರಂದು ದೆಹಲಿಯ ಕೆಂಪು ಕೋಟೆಯ ಮೂಲಕ ಮಾಡಿದ ತಮ್ಮ ಭಾಷಣದಲ್ಲಿ "ಗತಿ ಶಕ್ತಿ ಯೋಜನೆ" ಯನ್ನು ಘೋಷಿಸಿದ್ದರು. 100 ಲಕ್ಷ ಕೋಟಿಯ ಈ ಯೋಜನೆಗೆ ನಾಳೆ ಚಾಲನೆ ನೀಡಲಾಗುತ್ತಿದೆ. ಈ ಯೋಜನೆಯನ್ನು ದೇಶದಲ್ಲಿ ಉದ್ಯೋಗಾವಕಾಶಗಳನ್ನು ಸುಧಾರಿಸಲು ಬಳಸಲಾಗುತ್ತದೆ.

ಈ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. 100 ಲಕ್ಷ ಕೋಟಿ ರೂಪಾಯಿಗಳ ಈ ಯೋಜನೆಯನ್ನು ದೇಶದಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಬಳಸಲಾಗುತ್ತಿದೆ.

ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ಮೂಲಕ ದೇಶದ ಯುವಕರಿಗೆ ಉದ್ಯೋಗಾವಕಾಶಗಳನ್ನು (Employement Generation) ಒದಗಿಸುವ ಗುರಿ ಹೊಂದಲಾಗಿದೆ. ಈ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯದ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಈ ಯೋಜನೆಯ ಮೂಲಕ ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸುವ ಗುರಿ ಇದೆ. ಇದು ಕೈಗಾರಿಕೆಗಳ ಅಭಿವೃದ್ಧಿಗೆ ಕಾರಣವಾಗಲಿದೆ. 

ಆಗಸ್ಟ್ 15 ರಂದು ಯೋಜನೆಯನ್ನು ಘೋಷಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಯೋಜನೆಯಲ್ಲಿ ರೈಲ್ವೆ, ರಸ್ತೆಗಳು ಮತ್ತು ಹೆದ್ದಾರಿಗಳು, ಪೆಟ್ರೋಲಿಯಂ ಮತ್ತು ಅನಿಲ, ವಿದ್ಯುತ್, ದೂರಸಂಪರ್ಕ, ಹಡಗು, ವಾಯುಯಾನ ಮತ್ತು ಕೈಗಾರಿಕಾ ಪಾರ್ಕ್ ಇಲಾಖೆಗಳು ಸೇರಿದಂತೆ ಕೇಂದ್ರ ಸರ್ಕಾರದ 16 ಇಲಾಖೆಗಳು ಒಳಗೊಳ್ಳಲಿವೆ ಎಂದು ಹೇಳಿದ್ದರು. ಕೇಂದ್ರದ ಎಲ್ಲಾ 16 ಇಲಾಖೆಗಳ ಉನ್ನತ ಅಧಿಕಾರಿಗಳ ನೆಟ್ವರ್ಕ್ ಪ್ಲಾನಿಂಗ್ ಗ್ರೂಪ್ ರಚಿಸಲಾಗುವುದು ಎಂದು ಅವರು ಹೇಳಿದ್ದರು.

ಇದನ್ನೂ ಓದಿ- RSS Chief On Religious Conversion:'ಧರ್ಮದ ಪ್ರತಿ ಗೌರವ ಹೆಚ್ಚಾಗಬೇಕು...' ಹಿಂದೂ ಯುವತಿಯರ ಮತಾಂತರ ಕುರಿತು RSS ಮುಖ್ಯಸ್ಥ Mohan Bhagwat ಹೇಳಿದ್ದೇನು?

ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯ ವಿಶೇಷತೆ ಏನು? (What Are The Highlights)
>>  ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಯನ್ನು ಪ್ರಧಾನಿ ಮೋದಿಯವರು 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದಾರೆ.

>>  ಗತಿ ಶಕ್ತಿ ಯೋಜನೆಯ ಒಟ್ಟು ಬಜೆಟ್ ಅನ್ನು 100 ಲಕ್ಷ ಕೋಟಿಗಳಿಗೆ ನಿಗದಿಪಡಿಸಲಾಗಿದೆ.

>> ಪಿಎಂ ಗತಿ ಶಕ್ತಿ ಯೋಜನೆ ಮೂಲಕ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಾಗುವುದು.

>> ಈ ಯೋಜನೆಯು ಮೂಲಭೂತ ಸೌಕರ್ಯಗಳ ಸರ್ವತೋಮುಖ ಅಭಿವೃದ್ಧಿಯನ್ನು ಖಚಿತಪಡಿಸುತ್ತದೆ.

ಇದನ್ನೂ ಓದಿ-RBI New Rule: IMPS ನಿಧಿ ವರ್ಗಾವಣೆ ಮಿತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ, ಕೋಟಿಗಟ್ಟಲೆ ಗ್ರಾಹಕರಿಗೆ ಪ್ರಯೋಜನ

>> ಸ್ಥಳೀಯ ಉತ್ಪಾದಕರನ್ನು ಜಾಗತಿಕವಾಗಿ ಸ್ಪರ್ಧಾತ್ಮಕಗೊಳಿಸಲಾಗುವುದು.

>> ಹೊಸ ಆರ್ಥಿಕ ವಲಯಗಳನ್ನು ಸಹ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು.

>> ಆಧುನಿಕ ಮೂಲಸೌಕರ್ಯದೊಂದಿಗೆ ಮೂಲಸೌಕರ್ಯ ನಿರ್ಮಾಣದಲ್ಲಿ ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು.

>> ಈ ಯೋಜನೆಯ ಮೂಲಕ ಸಮಗ್ರ ಮೂಲಸೌಕರ್ಯದ ಅಡಿಪಾಯವನ್ನು ಹಾಕಲಾಗುವುದು.

ಇದನ್ನೂ ಓದಿ-Sputnik Light Update: ಭಾರತದಲ್ಲಿ ತಯಾರಾದ ರಷ್ಯನ್ ಕರೋನಾ ಲಸಿಕೆ ಸ್ಪುಟ್ನಿಕ್ ಲೈಟ್ ರಫ್ತಿಗೆ ಸರ್ಕಾರದ ಅನುಮತಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News