PM Gatishakti Scheme: ಪ್ರಧಾನಿ ಗತಿಶಕ್ತಿ ಯೋಜನೆ ಘೋಷಿಸಿದ ಪ್ರಧಾನಿ ಮೋದಿ, ಏನಿದರ ವಿಶೇಷತೆ?

PM Gatishakti National Plan Scheme- 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ  ಪ್ರಧಾನಿ ಗತಿಶಕ್ತಿ ಯೋಜನೆಯನ್ನು ಘೋಷಿಸಿದ್ದಾರೆ. ಇದಕ್ಕಾಗಿ 100 ಲಕ್ಷ ಕೋಟಿ ಖರ್ಚು ಮಾಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

Written by - Nitin Tabib | Last Updated : Aug 15, 2021, 11:57 AM IST
  • ಜಾಗತಿಕ ಮಟ್ಟದ ಉತ್ಪನ್ನಗಳ ಉತ್ಪಾದನೆಯತ್ತ ಭಾರತ ಹೆಜ್ಜೆ ಇಡುತ್ತದೆ.
  • ದೇಶಾದ್ಯಂತ ಡಿಜಿಟಲ್ ಉದ್ಯಮಿಗಳ ಸಂಖ್ಯೆ ಹೆಚ್ಚಾಗುತ್ತಿದೆ.
  • ದೇಶದಲ್ಲಿ ಯುವಕರಿಗೆ ಸಿಗಲಿದೆ ಉದ್ಯೋಗಾವಕಾಶ.
PM Gatishakti Scheme: ಪ್ರಧಾನಿ ಗತಿಶಕ್ತಿ ಯೋಜನೆ ಘೋಷಿಸಿದ ಪ್ರಧಾನಿ ಮೋದಿ, ಏನಿದರ ವಿಶೇಷತೆ? title=
PM Gatishakti National Plan Scheme (File Photo)

ನವದೆಹಲಿ: PM Gatishakti National Plan Scheme - 75ನೇ ಸ್ವಾತಂತ್ರ್ಯ ದಿನಾಚರಣೆಯ (75th Independence Day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ ಪ್ರಜೆಗಳಿಗೆ ಬಹುದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯಿಂದ ಮಾಡಿದ ತಮ್ಮ ಭಾಷಣದಲ್ಲಿ  ಪ್ರಧಾನಿ ನರೇಂದ್ರ ಮೋದಿ, 'ಪ್ರಧಾನಮಂತ್ರಿ ಗತಿಶಕ್ತಿ ನ್ಯಾಷನಲ್ ಯೋಜನೆ' (PM Gatishakti Scheme) ಘೋಷಣೆ ಮೊಳಗಿಸಿದ್ದಾರೆ. ಈ ಯೋಜನೆಯ ಅಡಿ ಕೇಂದ್ರ ಸರ್ಕಾರ (Central Government) 100 ಲಕ್ಷ ಕೋಟಿ ರೂ. ಖರ್ಚು ಮಾಡಲಿದೆ. ಈ ಯೋಜನೆಯ ಅಡಿ ದೇಶದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯ ಅಭಿವೃದ್ಧಿ ಕೂಡ ಮಾಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. 

ದೇಶದ ಯುವಕರಿಗೆ ಸಿಗಲಿದೆ ಉದ್ಯೋಗ
75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಿಂದ ದೇಶದ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ, ಆಧುನೀಕರಣದೊಂದಿಗೆ, ಭಾರತವು ತನ್ನ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಸರ್ವತೋಮುಖ ಅಭಿವೃದ್ಧಿಯನ್ನು ಮಾಡಬೇಕಾಗಿದೆ. ಇದಕ್ಕಾಗಿ ಶೀಘ್ರದಲ್ಲಿಯೇ ಗತಿಶಕ್ತಿ-ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. 

ಈ ಯೋಜನೆಯ ಲಾಭಗಳೇನು?
100 ಲಕ್ಷ ಕೋಟಿಗೂ ಹೆಚ್ಚು ವೆಚ್ಚದ ಈ ಗತಿಶಕ್ತಿ ಯೋಜನೆ ದೇಶದ ಯುವಕರಿಗೆ ಉದ್ಯೋಗ ನೀಡುವುದಲ್ಲದೆ, ಮೂಲಭೂತ ಸೌಕರ್ಯಗಳ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ರೀತಿಯ ಗತಿಶಕ್ತಿ ಉಪಕ್ರಮದಿಂದ ಸ್ಥಳೀಯ ಉತ್ಪಾದಕರು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಲು ಸಾಧ್ಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಇದರ ಜೊತೆಯಲ್ಲಿ, ಭವಿಷ್ಯದಲ್ಲಿ ಹೊಸ ಆರ್ಥಿಕ ವಲಯಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆಗಳೂ ಕೂಡ ಇದರಿಂದ ಹೆಚ್ಚಾಗಲಿವೆ ಎಂದು ಅವರು ಹೇಳಿದ್ದಾರೆ. 

ಇದನ್ನೂ ಓದಿ-Independence Day 2021: ‘ಅಮೃತ’ ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ್ ಬೊಮ್ಮಾಯಿ

ಜಾಗತಿಕ ಮಟ್ಟದ ಉತ್ಪನ್ನಗಳ ಉತ್ಪಾದನೆಯತ್ತ ಹೆಜ್ಜೆ
7 ವರ್ಷಗಳ ಹಿಂದೆ 8 ಬಿಲಿಯನ್ ಡಾಲರ್ ಮೌಲ್ಯದ ಮೊಬೈಲ್ ಫೋನ್ ಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲಾಗುತ್ತಿದ್ದು ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಈಗ ಭಾರತವು ಪ್ರತಿ ವರ್ಷ 3 ಬಿಲಿಯನ್ ಡಾಲರ್ ಮೌಲ್ಯದ ಮೊಬೈಲ್ ಫೋನ್ ಗಳನ್ನು ರಫ್ತು ಮಾಡುತ್ತದೆ. ವಿಶ್ವ ದರ್ಜೆಯ ಉತ್ಪಾದನೆ ಮಾಡುವ ದೇಶವಾಗಿ ನಾವು ನಮ್ಮ ಛಾಪು ಮೂಡಿಸಬೇಕಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಭವಿಷ್ಯದಲ್ಲಿ ಭಾರತವು ಹೊಸ ಆವಿಷ್ಕಾರ ಮತ್ತು ಹೊಸ ಯುಗದ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುವ ದೇಶವಾಗಿ ಹೊರಹೊಮ್ಮಲಿದೆ.

ಇದನ್ನೂ ಓದಿ-ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂಭ್ರಮ : ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಡಿಜಿಟಲ್ ಉದ್ಯಮಿಗಳ ಸಂಖ್ಯೆ ಹೆಚ್ಚಾಗುತ್ತಿದೆ
ಎರಡು ಹೆಕ್ಟೇರ್ ಗಿಂತ ಕಡಿಮೆ ಭೂಮಿಯನ್ನು ಹೊಂದಿರುವ ದೇಶದ ಸುಮಾರು ಶೇ.80ರಷ್ಟು ಸಣ್ಣ ರೈತರ ಮೇಲೆ ಸರ್ಕಾರ ತನ್ನ ಗಮನ ಕೇಂದ್ರೀಕರಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಕೂಡ ದೊಡ್ಡ ದೊಡ್ಡ ಬದಲಾವಣೆಗಳು ಆಗುತ್ತಿದ್ದು, ಗ್ರಾಮೀಣ ಭಾಗದಿಂದಲೂ ಕೂಡ ಡಿಜಿಟಲ್ ಉದ್ಯಮಿಗಳು ಬರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಇದನ್ನೂ ಓದಿ-Indian Independence Day 2021: ದೇಶಭಕ್ತಿ ಚಿಮ್ಮಿಸುವ ಕನ್ನಡದ ಟಾಪ್ 5 ಚಿತ್ರ ಗೀತೆಗಳು…

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News