Free Ration : ಕೋವಿಡ್ ಸಮಯದಲ್ಲಿ 80 ಕೋಟಿ ಭಾರತೀಯರಿಗೆ 'ಉಚಿತ ಪಡಿತರ' : ಪ್ರಧಾನಿ ಮೋದಿ

8 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ಸಹ ನೀಡಲಾಯಿತು. 20 ಕೋಟಿಗೂ ಹೆಚ್ಚು ಮಹಿಳೆಯರು ತಮ್ಮ ಜನ್ ಧನ್ ಬ್ಯಾಂಕ್ ಖಾತೆಗಳಲ್ಲಿ ಸುಮಾರು ₹ 30,000 ಕೋಟಿಗಳನ್ನು ನೇರವಾಗಿ ಪಡೆದಿದ್ದಾರೆ ಎಂದು ಹೇಳಿದರು.

Written by - Channabasava A Kashinakunti | Last Updated : Aug 7, 2021, 09:05 PM IST
  • PMGKAY ಯ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂವಾದ
  • ಕೊರೋನಾ ವಿರುದ್ಧ ಹೋರಾಡುತ್ತಿರುವ ದೇಶದ ಬಡ ನಾಗರಿಕರಿಗೆ ಸರ್ಕಾರದ ಕಾರ್ಯತಂತ್ರ
  • ಲಾಕ್‌ಡೌನ್ ಸಮಯದಲ್ಲಿ ಕೇವಲ ಗೋಧಿ, ಅಕ್ಕಿ ಅಥವಾ ದ್ವಿದಳ ಧಾನ್ಯಗಳು
Free Ration : ಕೋವಿಡ್ ಸಮಯದಲ್ಲಿ 80 ಕೋಟಿ ಭಾರತೀಯರಿಗೆ 'ಉಚಿತ ಪಡಿತರ' : ಪ್ರಧಾನಿ ಮೋದಿ title=

ಭೋಪಾಲ್ : ಮಧ್ಯಪ್ರದೇಶದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಯ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂವಾದ ನಡೆಸಿದರು. 

ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನಡೆಸಿದ ಸಂವಾದದಲ್ಲಿ, ಕೊರೋನಾ(Corona) ವಿರುದ್ಧ ಹೋರಾಡುತ್ತಿರುವ ದೇಶದ ಬಡ ನಾಗರಿಕರಿಗೆ ಸರ್ಕಾರದ ಕಾರ್ಯತಂತ್ರಗಳನ್ನು ಮುಡಪಾಗಿರಿಸಲಾಗಿದೆ. ದೇಶದಲ್ಲಿ ಕೋವಿಡ್ -19 ಶುರುವಾದ ನಂತರ 80 ಕೋಟಿಗೂ ಹೆಚ್ಚು ನಾಗರಿಕರಿಗೆ ಉಚಿತ ಪಡಿತರವನ್ನು ಒದಗಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ : PM Kisan ಯೋಜನೆಯ 9ನೇ ಕಂತಿನ ಹಣ ಈ ದಿನ ರೈತರ ಖಾತೆಗೆ : ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಪ್ರಧಾನಿ ಮೋದಿ

ಲಾಕ್‌ಡೌನ್ ಸಮಯದಲ್ಲಿ ಕೇವಲ ಗೋಧಿ, ಅಕ್ಕಿ ಅಥವಾ ದ್ವಿದಳ ಧಾನ್ಯಗಳು ಮಾತ್ರವಲ್ಲದೆ 8 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್‌ಗಳನ್ನು ಸಹ ನೀಡಲಾಯಿತು. 20 ಕೋಟಿಗೂ ಹೆಚ್ಚು ಮಹಿಳೆಯರು ತಮ್ಮ ಜನ್ ಧನ್ ಬ್ಯಾಂಕ್ ಖಾತೆ(Jan Dhan Bank Account)ಗಳಲ್ಲಿ ಸುಮಾರು ₹ 30,000 ಕೋಟಿಗಳನ್ನು ನೇರವಾಗಿ ಪಡೆದಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ : ತ್ರಿಪುರಾ ಸಿಎಂ ಬಿಬ್ಲಬ್ ದೇವ್ ಹತ್ಯೆಗೆ ಯತ್ನ: ಮೂವರ ಬಂಧನ

ಕಳೆದ ಹಲವು ವರ್ಷಗಳಿಂದ ನಿಜವಾದ ಅರ್ಥದಲ್ಲಿ ಬಡ ನಾಗರಿಕರಿಗೆ ಶಕ್ತಿ ನೀಡಲು ಸರ್ಕಾರಗಳ ಕಾರ್ಯತಂತ್ರಗಳು ಮತ್ತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News