PM Modi Big Announcement- ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ: ಪ್ರಧಾನಿ ಮೋದಿ ಮಹತ್ವದ ಘೋಷಣೆ

PM Modi Big Announcement- ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಘೋಷಣೆ ಮಾಡಿದರು ಮತ್ತು ಹೊಸ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರು.

Written by - Yashaswini V | Last Updated : Nov 19, 2021, 10:08 AM IST
  • ಶುಕ್ರವಾರ ಪ್ರಕಾಶ್ ಪರ್ವ್ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
  • ಎಂಎಸ್‌ಪಿಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕವಾಗಿಸಲು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಂತಹ ಎಲ್ಲಾ ವಿಷಯಗಳ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಿತಿಯನ್ನು ರಚಿಸಲಾಗುವುದು- ಪ್ರಧಾನಿ ನರೇಂದ್ರ ಮೋದಿ
  • ಈ ಸಮಿತಿಯಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು, ರೈತರು, ಕೃಷಿ ವಿಜ್ಞಾನಿಗಳು, ಕೃಷಿ ಅರ್ಥಶಾಸ್ತ್ರಜ್ಞರ ಪ್ರತಿನಿಧಿಗಳು ಇರುತ್ತಾರೆ
PM Modi Big Announcement- ನಾವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ: ಪ್ರಧಾನಿ ಮೋದಿ ಮಹತ್ವದ ಘೋಷಣೆ title=
PM Modi Withdraws Farm Laws, Urges Farmers to End Protest

PM Modi Big Announcement- ಇಂದು ಬೆಳಿಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.

ಗುರುನಾನಕ್ ಜಯಂತಿ ಸಂದರ್ಭದಲ್ಲಿ ಜನರಿಗೆ ಶುಭಾಶಯಗಳನ್ನು ತಿಳಿಸುವ ಮೂಲಕ  ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಎಲ್ಲಾ ಮೂರು ಕೃಷಿ ಕಾನೂನುಗಳನ್ನು  (New Agriculture Laws)  ರದ್ದುಗೊಳಿಸಲು ನಾವು ನಿರ್ಧರಿಸಿದ್ದೇವೆ ಎಂದು ಇಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದು ದೊಡ್ಡ ಘೋಷಣೆ ಮಾಡಿದ್ದಾರೆ.

ನಮ್ಮ ಸರ್ಕಾರವು ರೈತರ (Farmers) ಕಲ್ಯಾಣಕ್ಕಾಗಿ, ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ದೇಶದ ಕೃಷಿ ಪ್ರಪಂಚದ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ ಪೂರ್ಣ ಪ್ರಾಮಾಣಿಕತೆಯಿಂದ,ಈ ಕಾನೂನನ್ನು ಒಳ್ಳೆಯ ಉದ್ದೇಶದಿಂದ, ಜನರ ಮೇಲಿನ ಭಕ್ತಿಯಿಂದ ತರಲಾಗಿದೆ ಎಂದವರು ತಿಳಿಸಿದರು.

ಇದನ್ನೂ ಓದಿ- Digital Loan: ಡಿಜಿಟಲ್ ಲೋನ್ ಆಪ್ ಗಳಿಗೆ ಕಡಿವಾಣ ಹಾಕಲು ಸಿದ್ಧತೆ

ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಈ ಮೂರು ಕೃಷಿ ಕಾನೂನುಗಳನ್ನು  (New Agriculture Laws)  ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.

ನಾನು ರೈತರಿಗಾಗಿ ಹೋರಾಟಗಳನ್ನು ನೋಡಿದ್ದೇನೆ ಮತ್ತು ಅದಕ್ಕಾಗಿಯೇ ಭಾರತ ಸರ್ಕಾರವು ಕೃಷಿ ವಿಕಾಸ ಯೋಜನೆಗೆ ಮಹತ್ವ ನೀಡಿದೆ. ಭಾರತದಲ್ಲಿ 80% ರೈತರು ಎರಡು ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿದ್ದಾರೆ. “ನಾನು 2014 ರಲ್ಲಿ ಪ್ರಧಾನ ಮಂತ್ರಿಯಾದಾಗ, ನಾವು (ಸರ್ಕಾರ) ರೈತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ… 80/100 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವ ಮತ್ತು 10 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಸಣ್ಣ ಪ್ರಮಾಣದ ರೈತರು ಎಂಬ ಸತ್ಯದ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ. ಈ ತುಂಡು ಭೂಮಿಯೇ ಅವರ ಉಳಿವು'' ಎಂದು ಪ್ರಧಾನಿ ಮೋದಿ  ಹೇಳಿದರು.

ರೈತರು ತಮ್ಮ ಕಠಿಣ ಪರಿಶ್ರಮಕ್ಕೆ ಸರಿಯಾದ ಮೊತ್ತವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಅನೇಕ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಾವು ಗ್ರಾಮೀಣ ಮೂಲಸೌಕರ್ಯ ಮಾರುಕಟ್ಟೆಯನ್ನು ಬಲಪಡಿಸಿದ್ದೇವೆ. ನಾವು ಎಂಎಸ್‌ಪಿ ಹೆಚ್ಚಿಸಿರುವುದು ಮಾತ್ರವಲ್ಲದೆ ದಾಖಲೆಯ ಸರ್ಕಾರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ನಮ್ಮ ಸರ್ಕಾರದ ಸಂಗ್ರಹಣೆಯು ಕಳೆದ ಹಲವು ದಶಕಗಳ ದಾಖಲೆಯನ್ನು ಮುರಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಇದನ್ನೂ ಓದಿ- Whatsapp: ವಾಟ್ಸಾಪ್‌ನ ಈ ಸಿಂಪಲ್ ಟ್ರಿಕ್‌ನೊಂದಿಗೆ, ನೀವು ಕೆಲವೇ ಸೆಕೆಂಡುಗಳಲ್ಲಿ ಸ್ನೇಹಿತರಿಗೆ ಹಣ ಕಳುಹಿಸಿ

ರೈತರಿಗೆ ಸಮಂಜಸವಾದ ದರದಲ್ಲಿ ಬೀಜಗಳನ್ನು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸಲು ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಕಾರಣವಾಗಿವೆ. ನಾವು ಫಸಲ್ ಬಿಮಾ ಯೋಜನೆಯನ್ನು ಬಲಪಡಿಸಿದ್ದೇವೆ, ಹೆಚ್ಚಿನ ರೈತರನ್ನು ಅದರ ಅಡಿಯಲ್ಲಿ ತಂದಿದ್ದೇವೆ ಎಂದು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News