PM Modi Birthday: ರಾಷ್ಟ್ರಪತಿ, ರಾಹುಲ್ ಹಾಗೂ ಅಮಿತ್ ಶಾ ಸೇರಿದಂತೆ ಹಲವು ಗಣ್ಯರಿಂದ ಪ್ರಧಾನಿ ಮೋದಿಗೆ ಶುಭ ಹಾರೈಕೆ

PM Modi: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ವಿಶೇಷ ಸಂದರ್ಭದಂದು ಪಕ್ಷ ಮತ್ತು ಪ್ರತಿಪಕ್ಷದ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಷಯಗಳನ್ನು ಕೋರುತ್ತಿದ್ದಾರೆ. ಇಲ್ಲಿದೆ ವಿವರ  

Written by - Nitin Tabib | Last Updated : Sep 17, 2022, 12:44 PM IST
  • ಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
  • ಪಿಎಂ ಮೋದಿ ಜನ್ಮದಿನ ಆಚರಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ ಭಾರಿ ಸಿದ್ಧತೆಯನ್ನು ನಡೆಸಿದೆ.
  • ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
PM Modi Birthday: ರಾಷ್ಟ್ರಪತಿ, ರಾಹುಲ್ ಹಾಗೂ ಅಮಿತ್ ಶಾ ಸೇರಿದಂತೆ ಹಲವು ಗಣ್ಯರಿಂದ ಪ್ರಧಾನಿ ಮೋದಿಗೆ ಶುಭ ಹಾರೈಕೆ title=
PM Narendra Modi Birthday

Happy Birthday PM Modi: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ 72ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪಿಎಂ ಮೋದಿ ಜನ್ಮದಿನ ಆಚರಣೆಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ ಭಾರಿ ಸಿದ್ಧತೆಯನ್ನು ನಡೆಸಿದೆ. ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇನ್ನೊಂದೆಡೆ ಪ್ರಧಾನಿ ಮೋದಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪಕ್ಷ-ಪ್ರತಿಪಕ್ಷದ ಮುಖಂಡರು ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಿದ್ದಾರೆ.

ಗೃಹ ಸಚಿವ ಅಮಿತ್ ಶಾ ಹೇಳಿದ್ದೇನು?
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 'ದೇಶದ ನೆಚ್ಚಿನ ನಾಯಕ ಹಾಗೂ ನಮ್ಮೆಲ್ಲರಿಗೆ ಪ್ರೇರಣೆ ನೀಡುವ ಪ್ರಧಾನ ಮಂತ್ರಿ ನರಂದ್ರ ಮೋದಿಜಿ ಅವರಿಗೆ ನಾನು ಹುಟ್ಟುಹಬ್ಬದ ಶುಭಾಷಯಗಳನ್ನು ಕೋರುತ್ತೇನೆ. ಮೋದಿ ಅವರ ಉತ್ತಮ ಆರೋಗ್ಯ ಹಾಗೂ ಸುದೀರ್ಘ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತದೆ. ಮೋದಿಜಿ ಅವರು ತಮ್ಮ ಭಾರತ ಮೊದಲು ಚಿಂತನೆಯ ಅಡಿ ಬಡವರ ಕಲ್ಯಾಣದ ಸಂಕಲ್ಪದಿಂದ ಅಸಾಧ್ಯ ಕೆಲಸಗಳನ್ನು ಸಾಧ್ಯವಾಗಿಸಿದ್ದಾರೆ" ಎಂದಿದ್ದಾರೆ. 

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?
ಮೋದಿ ಅವರ ಹುಟ್ಟುಹಬ್ಬಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಭಾರತದ ಯಶಸ್ವಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಅವರು ತಮ್ಮ ನಾಯಕತ್ವದಲ್ಲಿ ದೇಶದಲ್ಲಿ ಪ್ರಗತಿ ಮತ್ತು ಉತ್ತಮ ಆಡಳಿತಕ್ಕೆ ಅಭೂತಪೂರ್ವ ಶಕ್ತಿಯನ್ನು ನೀಡಿದ್ದಾರೆ ಮತ್ತು ವಿಶ್ವಾದ್ಯಂತ ಭಾರತದ ಪ್ರತಿಷ್ಠೆ ಮತ್ತು ಸ್ವಾಭಿಮಾನಕ್ಕೆ ಹೊಸ ಎತ್ತರವನ್ನು ನೀಡಿದ್ದಾರೆ. ದೇವರು ಅವರನ್ನು ಆರೋಗ್ಯವಾಗಿಟ್ಟು ದೀರ್ಘಾಯುಷ್ಯವನ್ನು ಕಾಪಾಡಲಿ" ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಶುಭಾಷಯ  ಕೋರಿದ ರಾಷ್ಟ್ರಪತಿ ದ್ರೌಪದಿ ಮುರ್ಮು 
ಪ್ರಧಾನಿ ಮೋದಿ ಅವರ ಜನುಮ ದಿನಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ರಾಷ್ಟ್ರಪತಿ, "ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು ಮತ್ತು ಶುಭ ಹಾರೈಕೆಗಳು. ನಿಮ್ಮ ಹೋಲಿಕೆಗೆ ಅಸಾಧ್ಯವಾದ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ನಡೆಸುತ್ತಿರುವ ರಾಷ್ಟ್ರ ನಿರ್ಮಾಣ ಅಭಿಯಾನವು ನಿಮ್ಮ ನಾಯಕತ್ವದಲ್ಲಿ ಮುಂದುವರಿಯಲಿ ಎಂದು ನಾನು ಬಯಸುತ್ತೇನೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ" ಎಂದಿದ್ದಾರೆ.

ರಾಹುಲ್ ಗಾಂಧಿ ಹೇಳಿದ್ದೇನು?
'ಭಾರತ ಜೋಡೋ ಯಾತ್ರೆ' ಕೈಗೊಂಡಿರುವ ರಾಹುಲ್ ಗಾಂಧಿ ಅವರು ಕೂಡ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಶುಭಾಷಯಗಳನ್ನು ಕೋರಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ರಾಹುಲ್, 'ಪಿಎಂ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳು' ಎಂದಿದ್ದಾರೆ.

ಪ್ರಧಾನಿ ಮೋದಿಗೆ ಶುಭಹಾರಿಸಿದ ಶಶಿ ತರೂರ್
'ನಮ್ಮ @PMOIndia ಶ್ರೀ @NarendraModi ಜೀ ಅವರಿಗೆ ಜನ್ಮದಿನದ ಶುಭಾಶಯಗಳು, ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದಯಪಾಲಿಸಲಿ. ಅವರು ನಮ್ಮ ದೇಶವಾಸಿಗಳ ಅನೇಕ ಅಂಧಕಾರಗಳನ್ನು ಹೋಗಲಾಡಿಸಲು ಕೆಲಸ ಮಾಡಲಿ ಮತ್ತು ಇದಕ್ಕೆ ಪ್ರತಿಯಾಗಿ ದೇವರು ಪ್ರಗತಿ, ಅಭಿವೃದ್ಧಿ ಮತ್ತು ಸಾಮಾಜಿಕ ಸಾಮರಸ್ಯದ ಬೆಳಕನ್ನು ನೀಡಲಿ' ಎಂದಿದ್ದಾರೆ.

ತಾಯಿ ಭಾರತೀಯ ಪರಮ ಉಪಾಸಕ ಪ್ರಧಾನಿ ಮೋದಿ ಎಂದ ಯೋಗಿ
ಉತ್ತರ ಪ್ರದೇಶದ ಮುಖ್ಯಮಂತ್ರಿಗಳಾಗಿರುವ ಯೋಗಿ ಆದಿತ್ಯನಾಥ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯಗಳನ್ನು ಕೋರುತ್ತ, 'ಒಂದೇ ಭಾರತ- ಶ್ರೇಷ್ಠ ಭಾರತ'ದ ಶಿಲ್ಪಿ, 'ಅಂತ್ಯೋದಯ'ದ ಉದ್ದೇಶದಿಂದ ರಾಷ್ರ ಆರಾಧನೆಯಲ್ಲಿ ಸತತ ನಿರತ, ಯಶಸ್ವಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀಗೆ ಅವರ ಹುಟ್ಟುಹಬ್ಬದ ಹಾರ್ದಿಕ ಶುಭಾಷಯಗಳು! ಪ್ರಭು ಶ್ರೀರಾಮಚಂದ್ರ, ತಾಯಿ ಭಾರತೀಯ ಪರಮ ಉಪಾಸಕರಾಗಿರುವ ಪ್ರಧಾನಮಂತ್ರಿಗಳಿಗೆ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ದಯಪಾಲಿಸಲಿ' ಎಂದಿದ್ದಾರೆ.

ಇದನ್ನೂ ಓದಿ-Cheetah For India: ಪ್ರಧಾನಿ ಹುಟ್ಟುಹಬ್ಬದಂದು ಭಾರತಕ್ಕೆ ವಿಶ್ವದ ಅತೀ ವೇಗದ ಚಿರತೆಗಳ ಆಗಮನ:70 ವರ್ಷಗಳ ಬಳಿಕ ಈ ಸೋಜಿಗ

ಪ್ರಧಾನಿ ಮೋದಿಗೆ ಶುಭ ಕೋರಿದ ಮಧ್ಯ ಪ್ರದೇಶ ಮುಖ್ಯಮಂತ್ರಿ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಷಯಗಳನ್ನು ಕೋರಿ ಟ್ವೀಟ್ ಮಾಡಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, 'ಮಧ್ಯ ಪ್ರದೇಶದ 8.5 ಕೋಟಿ ಜನರ ಪರವಾಗಿ ಪ್ರಧಾನಿ ಶ್ರೀಮಾನ್ @narendramodi  ಅವರಿಗೆ ಅನಂತ ಶುಭಾಷಯಗಳು. ಅವರ ನಾಯಕತ್ವದಲ್ಲಿ ದೇಶ ಪ್ರಗತಿ ಸಾಧಿಸುತ್ತಿದೆ. ಅವರು ಇಡೀ ವಿಶ್ವಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ, ಭಾರತದ ಜನತೆಯ ಕಲ್ಯಾಣಕ್ಕಾಗಿ, ಲೋಕಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ, ಇದು ಭೂಮಿಯ ಮೂಲ ಮಂತ್ರವಾಗಿದೆ ಮತ್ತು ಅದನ್ನು ಸಾಕಾರಗೊಳಿಸುತ್ತಿದ್ದಾರೆ' ಎಂದಿದ್ದಾರೆ.

ಇದನ್ನೂ ಓದಿ-PM Modi Fitness: 72ರ ಹರೆಯದಲ್ಲೂ ಪ್ರಧಾನಿ ಮೋದಿ ಹೇಗೆ ಫಿಟ್ ಆಗಿದ್ದಾರೆ ಗೊತ್ತಾ?

ಕರ್ನಾಟಕದ  ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?
ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿರುವ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ, ' ಗೌರವಾನ್ವಿತ ಪ್ರಧಾನಿ ಅವರಿಗೆ ಹುಟ್ಟುಹಬ್ಬದ ಶುಭಾಷಯಗಳು. @narendramodi ಜಿ. ಅವರ ಸಾಮಾನ್ಯ ಜನರನ್ನು ಸಬಲೀಕರಣಗೊಳಿಸುವ, ಪ್ರಮುಖ ಕ್ಷೇತ್ರಗಳನ್ನು ಸುಧಾರಿಸುವ, ಬಡವರ ಕಲ್ಯಾಣವನ್ನು ಖಾತ್ರಿಪಡಿಸುವ, ಭ್ರಷ್ಟಾಚಾರವನ್ನು ತೊಡೆದುಹಾಕುವ ಮತ್ತು ಉತ್ತಮ ಆಡಳಿತವನ್ನು ಮರುವ್ಯಾಖ್ಯಾನಿಸುವ ಅದ್ಭುತ ಪ್ರಯಾಣದಲ್ಲಿ ನಮ್ಮನ್ನು ಮುನ್ನಡೆಸಿದ್ದಾರೆ. ವಿಶ್ವರಂಗದಲ್ಲಿ ಭಾರತ ಕೂಡ ತನ್ನ ಸ್ಥಾನವನ್ನು ಪಡೆದುಕೊಂಡಿದೆ' ಎಂದಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News