PM Modi: ಐದು ರಾಜ್ಯಗಳ ವಿಧಾನಸಭೆ ಎಲೆಕ್ಷನ್ ದಿನಾಂಕ ಬಗ್ಗೆ ಸುಳಿವು ನೀಡಿದ ಪ್ರಧಾನಿ ಮೋದಿ!

ಮಾರ್ಚ್ 7 ರೊಳಗೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕುರಿತಾಗಿ ಪ್ರಧಾನಿ ಮೋದಿ ಸುಳಿವು

Last Updated : Feb 22, 2021, 10:20 PM IST
  • ಮಾರ್ಚ್ 7 ರೊಳಗೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕುರಿತಾಗಿ ಪ್ರಧಾನಿ ಮೋದಿ ಸುಳಿವು
  • ಅಸ್ಸಾಂನ ಧೆಮಾಜಿ ಜಿಲ್ಲೆಯ ಸಿಲಾಪಥರ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ
  • ಕೊನೆಯ ಬಾರಿಗೆ 2016 ರ ಮಾರ್ಚ್ 4 ರಂದು ರಲ್ಲಿ ವಿಧಾನಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸಲಾಗಿತ್ತು
PM Modi: ಐದು ರಾಜ್ಯಗಳ ವಿಧಾನಸಭೆ ಎಲೆಕ್ಷನ್ ದಿನಾಂಕ ಬಗ್ಗೆ ಸುಳಿವು ನೀಡಿದ ಪ್ರಧಾನಿ ಮೋದಿ! title=

ನವದೆಹಲಿ: ಮಾರ್ಚ್ 7 ರೊಳಗೆ 5 ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕುರಿತಾಗಿ ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ.

ಅಸ್ಸಾಂನ ಧೆಮಾಜಿ ಜಿಲ್ಲೆಯ ಸಿಲಾಪಥರ್ ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ(PM Modi), ಕೊನೆಯ ಬಾರಿಗೆ 2016 ರ ಮಾರ್ಚ್ 4 ರಂದು ರಲ್ಲಿ ವಿಧಾನಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸಲಾಗಿತ್ತು. ಈ ವರ್ಷವೂ ಮಾರ್ಚ್ 7 ರೊಳಗೆ ವಿಧಾನಸಭೆ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

Rahul Gandhi: 'ಇದೇ ಕಾರಣಕ್ಕೆ ಮೋದಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುತ್ತಿಲ್ಲ'

ಚುನಾವಣಾ ಆಯೋಗ(Election Commission) ಚುನಾವಣೆ ದಿನಾಂಕವನ್ನು ಪ್ರಕಟಿಸುತ್ತದೆ. ನಾನು ಅಸ್ಸಾಂ, ಪಶ್ಚಿಮಬಂಗಾಳ, ಪುದುಚೇರಿ, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಪ್ರಚಾರದಲ್ಲಿ ಭಾಗಿಯಾಗಲಿರುವ ಬಗ್ಗೆ ಮತ್ತು ಆಯೋಗ ಚುನಾವಣೆ ಘೋಷಣೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

Latest Onion Rate - ಅಡುಗೆ ಮನೆಗೆ ಹಣದುಬ್ಬರದ ಹೊಡೆತ, ಗಗನಮುಖಿಯಾದ ಈರುಳ್ಳಿ ಬೆಲೆ ಎಷ್ಟು ಗೊತ್ತಾ?

ಈಗಾಗಲೇ ಚುನಾವಣಾ ಆಯೋಗದಿಂದ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಸರ್ಕಾರಿ ನೌಕರಿ ಹುಡುಕುತಿದ್ದೀರಾ..? ಇಲ್ಲಿದೆ ನಿಮಗೊಂದು ಛಾನ್ಸ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News