ಬಿಜೆಪಿ ಅತಿ ದೊಡ್ಡ ಪಕ್ಷ; ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 104 ಸ್ಥಾನಗಳನ್ನು ಗಳಿಸಲು ಸಹಕರಿಸಿದ ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ. 

Last Updated : May 15, 2018, 07:23 PM IST
ಬಿಜೆಪಿ ಅತಿ ದೊಡ್ಡ ಪಕ್ಷ; ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ title=

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ 104 ಸ್ಥಾನಗಳನ್ನು ಗಳಿಸಲು ಸಹಕರಿಸಿದ ಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯದ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಏಕೈಕ ದೊಡ್ಡ ಪಕ್ಷವಾಗಿ ಗುರುತಿಸಿಕೊಳ್ಳಲು ಅವಕಾಶಮಾಡಿಕೊಟ್ಟ ಎಲ್ಲಾ ಸಹೋದರ ಸಹೋದರಿಯರಿಗೆ ನನ್ನ ಧನ್ಯವಾದಗಳು. ಹಾಗೆಯೇ ಪಕ್ಷದ ಗೆಲುವಿಗಾಗಿ ಹಗಲು-ರಾತ್ರಿ ಶ್ರಮಿಸಿದ ರಾಜ್ಯದ ಕಾರ್ಯಕರ್ತರಿಗೆ ದೊಡ್ಡ ಸಲ್ಯೂಟ್" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಪೈಕಿ, 222 ಕ್ಷೇತ್ರಗಳಿಗೆ ಮೇ 12 ರಂದು ಮತದಾನ ನಡೆದಿತ್ತು. ಇಂದು ಚುನಾವಣೆಯ ಮತಎಣಿಕೆ ನಡೆದು ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 104 ಸ್ಥಾನಗಳನ್ನು ಗಳಿಸಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಉಳಿದಂತೆ ಕಾಂಗ್ರೆಸ್ 78, ಜೆಡಿಎಸ್ 38 ಸ್ಥಾನಗಳನ್ನು ಗಳಿಸಿದ್ದು, ಇತರೆ 2 ಸ್ಥಾನಗಳನ್ನು ಗಳಿಸಿವೆ. 

Trending News