ನವದೆಹಲಿ : ಪ್ರಧಾನಮಂತ್ರಿ ಆವಾಸ್ ಯೋಜನೆ(PMAY)ಯಡಿ 3 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಮೂಲಸೌಕರ್ಯಗಳಿರುವ ಮನೆಗಳು ಮಹಿಳಾ ಸಬಲೀಕರಣದ ಸಂಕೇತವಾಗಿವೆ. ಇನ್ನು ದೇಶದ ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆ ನೀಡುವ ಸಂಕಲ್ಪದಲ್ಲಿ ನಾವು ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಜನರ ಸಹಭಾಗಿತ್ವದಿಂದ ಮೂರು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣ ಸಾಧ್ಯವಾಗಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: Harassment:ಪತ್ರಕರ್ತರು ಸೇರಿ 8 ಮಂದಿ ಬಂಧನ: ಅರೆನಗ್ನಗೊಳಿಸಿ ಕಿರುಕುಳ ನೀಡಿದ ಪೊಲೀಸರು!
ಗ್ರಾಮೀಣ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 2.52 ಕೋಟಿ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ 1.95 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ನಗರ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಇದುವರೆಗೆ 58 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಈ ಉದ್ದೇಶಕ್ಕಾಗಿ 1.18 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಇದನ್ನು ಓದಿ: ಭಾರತಕ್ಕೂ ಕಾಲಿಟ್ಟಿತೇ 10 ಪಟ್ಟು ವೇಗವಾಗಿ ಹರಡುವ ಕರೋನಾದ XE ರೂಪಾಂತರ.! ಲಕ್ಷಣಗಳೇನು ತಿಳಿಯಿರಿ
ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ನಿರ್ಮಾಣವಾದ ಪ್ರತಿ ಮನೆಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಅನಿಲ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಲಾಗುತ್ತದೆ ಎಂಬುದು ಶ್ಲಾಘನೀಯ ಸಂಗತಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.