Chandrayaan-3: ಭಾರತದಿಂದಲ್ಲ… ಈ ದೇಶದಲ್ಲಿ ಕುಳಿತು ಚಂದ್ರಯಾನ-3 ಲ್ಯಾಂಡಿಂಗ್ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ

Chandrayaan-3 Moon Landing: ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಕಾರಣ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಹೀಗಾಗಿ ಅಲ್ಲಿಂದಲೇ ದೇಶವಾಸಿಗಳ ಜೊತೆ ವರ್ಚುವಲ್ ರೀತಿಯಲ್ಲಿ ಚಂದ್ರಯಾನ-3 ವೀಕ್ಷಿಸಲಿದ್ದಾರೆ

Written by - Bhavishya Shetty | Last Updated : Aug 23, 2023, 02:12 PM IST
    • ಚಂದ್ರಯಾನ 3 ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗುವ ಕ್ಷಣಕ್ಕಾಗಿ ಕಾತುರ
    • ಪ್ರಧಾನಿ ನರೇಂದ್ರ ಮೋದಿಯವರು 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ
    • ಹೀಗಾಗಿ ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ರೀತಿಯಲ್ಲಿ ಚಂದ್ರಯಾನ-3 ವೀಕ್ಷಿಸಲಿದ್ದಾರೆ
Chandrayaan-3: ಭಾರತದಿಂದಲ್ಲ… ಈ ದೇಶದಲ್ಲಿ ಕುಳಿತು ಚಂದ್ರಯಾನ-3 ಲ್ಯಾಂಡಿಂಗ್ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ  title=
PM Narendra Modi

Chandrayaan-3 Moon Landing: ಚಂದ್ರಯಾನ 3 ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗುವ ಕ್ಷಣಕ್ಕಾಗಿ ದೇಶದ ಪ್ರಜೆಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತುತ 15 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಕಾರಣ ದಕ್ಷಿಣ ಆಫ್ರಿಕಾದಲ್ಲಿದ್ದಾರೆ. ಹೀಗಾಗಿ ಅಲ್ಲಿಂದಲೇ ದೇಶವಾಸಿಗಳ ಜೊತೆ ವರ್ಚುವಲ್ ರೀತಿಯಲ್ಲಿ ಚಂದ್ರಯಾನ-3 ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಐತಿಹಾಸಿಕ ಕ್ಷಣಕ್ಕೆ ಗಣ್ಯಾತಿಗಣ್ಯರು ಶುಭಕೋರಿದ್ದಾರೆ. ಅವರಲ್ಲಿ ಒಬ್ಬರಾದ ಭಾರತದ ಪ್ರಥಮ ಅಂತರಿಕ್ಷಯಾನಿ ರಾಕೇಶ್ ಶರ್ಮಾ, "ಚಂದ್ರಯಾನ 3 ಸುರಕ್ಷಿತ ಲ್ಯಾಂಡಿಂಗ್ ಆಗುವುದು ಖಂಡಿತ ಎಂದು ಹೆಮ್ಮೆಯಿಂದ ಹೇಳುವೆ" ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರನ ದಕ್ಷಿಣ ಧ್ರುವ ತಲುಪಲು ಬಾಹ್ಯಾಕಾಶ ಸಂಸ್ಥೆಗಳ ಮಧ್ಯೆ ಇಷ್ಟೊಂದು ಪೈಪೋಟಿ ಯಾಕೆ ಗೊತ್ತಾ ? ಇಲ್ಲಿದೆ ಕಾರಣ 

ಇನ್ನು ‘ಭಾರತೀಯರಿಗೆ ಶುಭವಾಗಲಿ' ಎಂದು ಹೇಳುವ ಮೂಲಕ ಭಾರತೀಯ-ಅಮೆರಿಕನ್ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಚಂದ್ರಯಾನ-3 ಮಿಷನ್‌’ನ ಲ್ಯಾಂಡರ್ ಮಾಡ್ಯೂಲ್ ಸಾಫ್ಟ್ ಲ್ಯಾಂಡಿಂಗ್’ಗೆ ಶುಭಹಾರೈಸಿದ್ದಾರೆ. “ಆಗಸ್ಟ್ 23 ರಂದು ಚಂದ್ರಯಾನ-3 ಚಂದ್ರನ ಮೇಲ್ಮೈ ಮುಟ್ಟುವುದನ್ನು ನೋಡಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಅದೃಷ್ಟವಂತರು ನಾವು" ಎಂದು ಅನುಭವಿ ನಾಸಾ ಗಗನಯಾತ್ರಿ ನ್ಯಾಷನಲ್ ಜಿಯಾಗ್ರಫಿಕ್ ಇಂಡಿಯಾ ಹಂಚಿಕೊಂಡ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಚಂದ್ರಯಾನ -3 ಲ್ಯಾಂಡಿಂಗ್ ವೀಕ್ಷಿಸಲು ಬೆಂಗಳೂರಿನ‌ ನೆಹರು ತಾರಾಲಯದಲ್ಲಿ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಲ್ಯಾಂಡಿಂಗ್ ಲೈವ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದ್ದೇವೆ. ಇಂದು ಸಂಜೆ 5 ಗಂಟೆ 10 ನಿಮಿಷಕ್ಕೆ ಲೈವ್ ಆರಂಭವಾಗಲಿದೆ ಎಂದು ನೆಹರು ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿ  ಹೇಳಿದ್ದಾರೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷೆಯ 3ನೇ ಚಂದ್ರನ ಮಿಷನ್ ಚಂದ್ರಯಾನ-3ರ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಇಂದು ಸಂಜೆ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಲು ಸಿದ್ಧವಾಗಿದೆ. ಇದರಲ್ಲಿ ಯಶಸ್ವಿಯಾದರೆ ಯುಎಸ್, ಚೀನಾ ಮತ್ತು ಸೋವಿಯತ್ ಒಕ್ಕೂಟದ ಬಳಿಕ ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಿಲಿದೆ. ಇನ್ನೊಂದೆಡೆ ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವ ಪ್ರದೇಶದಲ್ಲಿ ನೌಕೆ ಇಳಿಸುವ ಮೊದಲ ದೇಶ ಎನ್ನುವ ಹೆಗ್ಗಳಿಕೆ ಭಾರತ ಪಾತ್ರವಾಗಲಿದೆ.

ಇದನ್ನೂ ಓದಿ: “Heath Streak ಇನ್ನೂ ಬದುಕಿದ್ದಾರೆ..” ಸ್ಪಷ್ಟನೆ ನೀಡಿದ ಸಹ ಆಟಗಾರ ಹೆನ್ರಿ ಒಲಾಂಗ

ಇಸ್ರೋ ಪ್ರಕಾರ, ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸವನ್ನು ಸೃಷ್ಟಿಸಲು ಸಿದ್ಧವಾಗಿದೆ. ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನವು ಸುಮಾರು 6:04 ಗಂಟೆಗೆ ನಡೆಯಲಿದ್ದು, ಈ ಐತಿಹಾಸಿಕ ಕ್ಷಣ ಯಶಸ್ವಿಯಾಗಲಿ ಎಂದು ಪ್ರತಿಯೊಬ್ಬ ಭಾರತೀಯ ಪ್ರಜೆಗಳು ಒಕ್ಕೊರಳಿನಿಂದ ಪ್ರಾರ್ಥಿಸುತ್ತಿದ್ದಾರೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News