ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕೇದಾರನಾಥಕ್ಕೆ ಭೇಟಿ ನೀಡಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ
ತೃಣಮೂಲ ಕಾಂಗ್ರೆಸ್ ದೂರು ನೀಡಿದೆ.
"ಕೊನೆಯ ಹಂತದ ಚುನಾವಣೆಗೆ ಬಹಿರಂಗ ಪ್ರಚಾರ ಕೊನೆಗೊಂಡಿದ್ದರೂ ಸಹ ಪ್ರಧಾನಿ ಮೋದಿ ಅವರ ಕೇದಾರನಾಥ ಯಾತ್ರೆ ಕುರಿತ ವರದಿಗಳು ಕಳೆದ ಎರಡು ದಿನಗಳಿಂದ ಸುದ್ದಿ ವಾಹಿನಿಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ. ಇದರಿಂದ ಮೋದಿಗೆ ಪ್ರಚಾರ ಸಿಕ್ಕಂತಾಗಿದೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ನಾಯಕ ಡೆರೆಕ್ ಒ'ಬ್ರಿಯೆನ್ ಚುನಾವಣಾ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.
ಉತ್ತರಾಖಂಡದ ಕೇದಾರನಾಥ ಮತ್ತು ಬದ್ರಿನಾಥ್ ದೇವಾಲಯಗಳಿಗೆ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದರು. ಬಳಿಕ ಅಲ್ಲಿನ ಪಟ್ಟಣದ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ಬಳಿಕ ಸಂಜೆ ಅಲ್ಲಿನ ಗುಹೆಯಲ್ಲಿ ರಾತ್ರಿಯಿಡೀ ಧ್ಯಾನದಲ್ಲಿ ತಲ್ಲೀನರಾಗಿ ಭಾನುವಾರ ಬದರೀನಾಥ್ ಗೆ ತೆರಳಿದ್ದಾರೆ.