ಪ್ರಧಾನಿ ಮೋದಿ ಜನತೆಯ ದಾರಿತಪ್ಪಿಸುತ್ತಿದ್ದಾರೆ: ಮಾಯಾವತಿ

ಉತ್ತರಪ್ರದೇಶದ ಮೀರತ್ ನಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಚುನಾವಣೆಗೂ ಮುನ್ನ, ಪ್ರಧಾನಿ ಮೋದಿ ಜನರ ದಾರಿತಪ್ಪಿಸುತ್ತಿದ್ದಾರೆ ಎಂದಿದ್ದಾರೆ.

Last Updated : Apr 8, 2019, 05:04 PM IST
ಪ್ರಧಾನಿ ಮೋದಿ ಜನತೆಯ ದಾರಿತಪ್ಪಿಸುತ್ತಿದ್ದಾರೆ: ಮಾಯಾವತಿ  title=

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನತೆಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಉತ್ತರಪ್ರದೇಶದ ಮೀರತ್ ನಲ್ಲಿ ಸೋಮವಾರ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, ಚುನಾವಣೆಗೂ ಮುನ್ನ, ಪ್ರಧಾನಿ ಮೋದಿ ಜನರ ದಾರಿತಪ್ಪಿಸುತ್ತಿದ್ದಾರೆ. ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಳಿಕವೂ ಬಿಜೆಪಿ ಕಾರ್ಯಕ್ರಮಗಳು ಮುಂದುವರೆದಿವೆ.  ಕಬ್ಬು ಬೆಳೆಗಾರರ ಬಗ್ಗೆ ಮಾತನಾಡುತ್ತಾ, ಕಬ್ಬು ಬೆಲೆ ಪಾವತಿ ಹಾಗೂ ಕಬ್ಬು ಬೆಳೆಗಾರರ ಸಾಲ ಮನ್ನಾದಲ್ಲಿ ತಪ್ಪಾಗಿದೆ ಎಂದು ಮಾಯಾವತಿ ಹೇಳಿದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಯಾವತಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರಭಾವಗೊಳ್ಳಲಿದ್ದು, ಮೈತ್ರಿ ಸರ್ಕಾರ ರಚನೆಯಾಗಲಿದೆ ಎಂದರಲ್ಲದೆ ಮತದಾನದ ಸಂದರ್ಭದಲ್ಲಿ ಮತಯಂತ್ರಗಳ ಅಕ್ರಮದ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ದೇಶದಲ್ಲಿ ಹಾಗೂ ಇತರ ರಾಜ್ಯಗಳಲ್ಲಿ ತಪ್ಪು ನೀತಿಗಳನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು.

Trending News