ಪ್ರಧಾನಿಗಳ ಬಗ್ಗೆ ಮಾತನಾಡುತ್ತಾ ಭಾವೋದ್ವೇಗಕ್ಕೆ ಒಳಗಾದ ಮೋದಿ ಸಹೋದರ

PM Modi brother Somabhai Modi emotional : ಗುಜರಾತ್ ವಿಧಾನಸಭಾ ಚುನಾವಣೆಯ 14 ಜಿಲ್ಲೆಗಳ 93 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದರು.

Written by - Channabasava A Kashinakunti | Last Updated : Dec 5, 2022, 03:32 PM IST
  • ಪ್ರಧಾನಿ ಬಗ್ಗೆ ಮಾತನಾಡುತ್ತಾ ಭಾವುಕರಾದ ಮೋದಿ ಸಹೋದರ
  • ಪ್ರಧಾನಿ ಮೋದಿಗೆ ಈ ಮಹತ್ವದ ಸಲಹೆ ನೀಡಿದ ಸಹೋದರ
  • ಮತದಾರರಿಗೆ ಪ್ರಧಾನಿ ಮೋದಿಯವರ ಸಹೋದರ ಸಂದೇಶ
ಪ್ರಧಾನಿಗಳ ಬಗ್ಗೆ ಮಾತನಾಡುತ್ತಾ ಭಾವೋದ್ವೇಗಕ್ಕೆ ಒಳಗಾದ ಮೋದಿ ಸಹೋದರ title=

PM Modi brother Somabhai Modi emotional : ಗುಜರಾತ್ ವಿಧಾನಸಭಾ ಚುನಾವಣೆಯ 14 ಜಿಲ್ಲೆಗಳ 93 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ ಮತ ಚಲಾಯಿಸಿದರು. ನಂತರ ತಮ್ಮ ಹಿರಿಯ ಸಹೋದರ ಸೋಮಭಾಯಿ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಗ್ಗೆ ಮಾತನಾಡಿದ ಸೋಮಾಭಾಯಿ, ನನಗೆ ಹೆಮ್ಮೆ ಅನಿಸುತ್ತದೆ ಎಂದು ಭಾವುಕರಾದರು.

ಪ್ರಧಾನಿ ಬಗ್ಗೆ ಮಾತನಾಡುತ್ತಾ ಭಾವುಕರಾದ ಮೋದಿ ಸಹೋದರ  

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಾಭಾಯಿ ಮೋದಿ ಅವರು ಪ್ರಧಾನಿ ಬಗ್ಗೆ ಮಾತನಾಡುತ್ತಾ, 2014ರ ನಂತರ ಕೇಂದ್ರದ ಕೆಲಸಗಳನ್ನು ಜನ ಕಡೆಗಣಿಸುವಂತಿಲ್ಲ ಎಂದರು. ಪ್ರಧಾನಿ ಮೋದಿ ಮತ್ತು ಅವರ ಸಹೋದರ ನಡುವೆ ಸುಮಾರು 23 ನಿಮಿಷಗಳ ಕಾಲ ಸಭೆ ನಡೆಯಿತು. ಇದರಿಂದ ತಿಳಿದು ಬಂದ ಸಂಗಾತಿಯಂದರೆ ಪಿಎಂ ಮೋದಿಯವರು ಪ್ರಧಾನ ಮಂತ್ರಿಯಾಗಿ ತಮ್ಮ ಅಣ್ಣ ತಮ್ಮರ ಮರೆತಿಲ್ಲ ಎಂಬುವುದು ತಿಳಿದು ಬರುತ್ತದೆ.

ಇದನ್ನೂ ಓದಿ : ಸಿಂಗಾಪುರದಲ್ಲಿ ಲಾಲು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ; ತಂದೆಗೆ ಕಿಡ್ನಿ ದಾನ ಮಾಡಿದ ಪುತ್ರಿ ರೋಹಿಣಿ

ಪ್ರಧಾನಿ ಮೋದಿಗೆ ಈ ಮಹತ್ವದ ಸಲಹೆ ನೀಡಿದ ಸಹೋದರ  

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಕುರಿತು ಮಾತನಾಡಿದ ಸೋಮಾಭಾಯಿ, ಮೋದಿ ಅವರು ಪ್ರಧಾನಿಯಾಗುವುದು ಮತ್ತು ದೇಶಕ್ಕಾಗಿ ಕೆಲಸ ಮಾಡುವುದನ್ನು ನೋಡಲು ನನಗೆ ತುಂಬಾ ಹೆಮ್ಮೆಯಾಗುತ್ತಿದೆ. ಇದಲ್ಲದೆ, ಸಭೆಯಲ್ಲಿ ಅವರು ತಮ್ಮ ಸಹೋದರನಿಗೆ ಪ್ರಮುಖ ಸಲಹೆಯನ್ನು ನೀಡಿದರು ಎಂದು ಹೇಳಿದರು. ಅವರು ದೇಶಕ್ಕಾಗಿ ಸಾಕಷ್ಟು ಕೆಲಸ ಮಾಡುತ್ತಾರೆ, ಅವರು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ನಾನು ಅವರಿಗೆ (ಪಿಎಂ ಮೋದಿ) ಹೇಳಿದ್ದೇನೆ.

ಮತದಾರರಿಗೆ ಪ್ರಧಾನಿ ಮೋದಿಯವರ ಸಹೋದರ ಸಂದೇಶ

ಗುಜರಾತ್ ಚುನಾವಣೆಗೆ ಸಂಬಂಧಿಸಿದಂತೆ ಸೋಮಭಾಯಿ ಮೋದಿ ಅವರು, 'ಮತದಾರರಿಗೆ ತಮ್ಮ ಮತವನ್ನು ಸರಿಯಾಗಿ ಬಳಸಿ ಮತ್ತು ದೇಶವನ್ನು ಪ್ರಗತಿ ಮಾಡುವ ಅಂತಹವರನ್ನು ಆಯ್ಕೆ ಮಾಡಿ ಎಂಬ ಸಂದೇಶವಿದೆ. 2014ರಿಂದ ಆಗಿರುವ ಅಭಿವೃದ್ಧಿ ಕಾರ್ಯಗಳಿಗೆ ಜನ ಮತ ಹಾಕುತ್ತಾರೆ ಎಂದು ಹೇಳಿದ್ದಾರೆ.

ಮತ ಚಲಾಯಿಸಿದ ಪ್ರಧಾನಿ ಮೋದಿಯವರ ತಾಯಿ 

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ಗುಜರಾತ್‌ನ ಎರಡನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಗಾಂಧಿನಗರದ ರೈಸನ್ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇದನ್ನೂ ಓದಿ : Indian Railway Recruitment 2022 : SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ 2521 ಹುದ್ದೆಗಳಿಗೆ ಅರ್ಜಿ!

14 ಜಿಲ್ಲೆಗಳ 93 ಸ್ಥಾನಗಳಿಗೆ ಮತದಾನ

ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆಗೆ ಎರಡನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ರಾಜ್ಯದ 14 ಜಿಲ್ಲೆಗಳ 93 ಸ್ಥಾನಗಳಿಗೆ ಬೆಳಗ್ಗೆ 8 ಗಂಟೆಯಿಂದ ಮತದಾನ ನಡೆಯುತ್ತಿದೆ. ಸಂಜೆ 5ರವರೆಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಒಟ್ಟು 833 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News