Telangana: 6,100 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

PM Narendra Modi in Warangal: ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್ ಬಹಿಷ್ಕಾರದ ಮಧ್ಯೆ, ದಕ್ಷಿಣ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಸುಮಾರು 6,100 ಕೋಟಿ ರೂ. ಮೌಲ್ಯದ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.  

Written by - Puttaraj K Alur | Last Updated : Jul 8, 2023, 04:35 PM IST
  • ತೆಲಂಗಾಣದಲ್ಲಿ 6,100 ಕೋಟಿ ರೂ. ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
  • 21ನೇ ಶತಮಾನದ 3ನೇ ದಶಕವು ಸುವರ್ಣ ಅವಧಿಯಾಗಿದ್ದು, ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು
  • ಇಂದು ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿದೆ ಎಂದ ಪ್ರಧಾನಿ ಮೋದಿ
Telangana: 6,100 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ  title=
ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ವಾರಂಗಲ್ (ತೆಲಂಗಾಣ): 21ನೇ ಶತಮಾನದ 3ನೇ ದಶಕವು ಸುವರ್ಣ ಅವಧಿಯಾಗಿದ್ದು, ಇದನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ರಾಷ್ಟ್ರವು ವೇಗವಾಗಿ ಪ್ರಗತಿ ಸಾಧಿಸುವಲ್ಲಿ ಹಿಂದೆ ಬೀಳಬಾರದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ತೆಲಂಗಾಣದಲ್ಲಿ ಸುಮಾರು 6,100 ಕೋಟಿ ರೂ. ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಯೋಜನೆಗಳ ಪೈಕಿ 5,550 ಕೋಟಿ ರೂ. ಮೌಲ್ಯದ 176 ಕಿಮೀ ಉದ್ದದ ರಾಷ್ಟ್ರೀಯ ಯೋಜನೆ ಮತ್ತು 500 ಕೋಟಿ ರೂ. ಮೌಲ್ಯದ ರೈಲ್ವೆ ವ್ಯಾಗನ್ ಉತ್ಪಾದನಾ ಘಟಕ ಸೇರಿದೆ.

ಇದನ್ನೂ ಓದಿ: Viral Video: ಮೊಸಳೆಯನ್ನೇ ಮದುವೆಯಾದ ಮೆಕ್ಸಿಕೊದ ಮೇಯರ್!

ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಇಂದು ಇಡೀ ವಿಶ್ವವೇ ಭಾರತದಲ್ಲಿ ಹೂಡಿಕೆ ಮಾಡಲು ಮುಂದೆ ಬರುತ್ತಿದೆ. ಇಂದಿನ ಭಾರತ ಯುವ ಮತ್ತು ಶಕ್ತಿಯಿಂದ ತುಂಬಿದೆ. ದೇಶದ ಯಾವುದೇ ಭಾಗವು ಬೆಳವಣಿಗೆಯಲ್ಲಿ ಹಿಂದುಳಿದಿಲ್ಲ’ವೆಂದು ಹೇಳಿದರು.

ತೆಲಂಗಾಣವು ಎಲ್ಲಾ ನೆರೆಯ ಆರ್ಥಿಕ ಕಾರಿಡಾರ್‌ಗಳನ್ನು ಸಂಪರ್ಕಿಸುವ ಕೇಂದ್ರವಾಗಿ ಬದಲಾಗುತ್ತಿರುವುದನ್ನು ಗಮನಿಸಿದ ಅವರು, ರಾಜ್ಯದ ಕೈಗಾರಿಕೆಗಳು ಮತ್ತು ಪ್ರವಾಸೋದ್ಯಮವು ಇದರಿಂದ ಪ್ರಯೋಜನ ಪಡೆಯುತ್ತಿದೆ. 21ನೇ ಶತಮಾನದ ಈ 3ನೇ ದಶಕವು ಸುವರ್ಣ ಅವಧಿಯಾಗಿದೆ ಮತ್ತು ಪ್ರತಿಯೊಬ್ಬರೂ ಈ ಅವಧಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: 25 ಕೋಟಿ ಜಾಕ್ ಪಾಟ್ ಗೆದ್ದಿದ್ದ ಲಾಟರಿಯನ್ನು ಶರಾಬು ಅಂಗಡಿಯಲ್ಲಿ ಮರೆತು ಬಂದ ವ್ಯಕ್ತಿ! ಮುಂದೆ ಆಗಿದ್ದು ರೋಚಕ !

ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡ, ಪ್ರಧಾನಿ ಮೋದಿಯವರು ದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ತೆಲಂಗಾಣದಲ್ಲಿ ಇಲ್ಲಿಯವರೆಗೆ 1.10 ಲಕ್ಷ ಕೋಟಿ ರೂ. ಮೌಲ್ಯದ ಮೂಲಸೌಕರ್ಯ ಯೋಜನೆಗಳು ಪೂರ್ಣಗೊಂಡಿವೆ ಅಥವಾ ಚಾಲ್ತಿಯಲ್ಲಿವೆ. 2024ರ ಅಂತ್ಯದ ವೇಳೆಗೆ ತೆಲಂಗಾಣ ರಾಜ್ಯದಲ್ಲಿ 2 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಹೊಂದುವ ವಿಶ್ವಾಸವಿದೆ ಎಂದು ಹೇಳಿದರು.

ಸಮಾರಂಭಕ್ಕೂ ಮೊದಲು ಪ್ರಧಾನಿ ಮೋದಿಯವರು ಕಾಕತೀಯ ಸಾಮ್ರಾಜ್ಯದ ಹಿಂದಿನ ರಾಜಧಾನಿ ಐತಿಹಾಸಿಕ ವಾರಂಗಲ್‌ನಲ್ಲಿರುವ ಪ್ರಸಿದ್ಧ ಭದ್ರಕಾಳಿ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್, ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ, ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಮತ್ತು ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News