"ಇದು ಸ್ವಾತಂತ್ರ್ಯದ ಅಮೃತೋತ್ಸವದ ಯುಗ": ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ಎಲ್ಲಾ ಸಂಸದರು ಆಳವಾಗಿ ಆಲೋಚಿಸಿ ಚರ್ಚಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸತ್ತಿನಲ್ಲಿ ಮುಕ್ತ ಮನಸ್ಸಿನ ಸಂವಾದ ನಡೆಯಬೇಕು. ಚರ್ಚೆಯೂ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Written by - Bhavishya Shetty | Last Updated : Jul 18, 2022, 11:34 AM IST
  • ಇಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ
  • ಎಲ್ಲರೂ ಸದನದ ಘನತೆ ಕಾಪಾಡಬೇಕು ಎಂದು ಪ್ರಧಾನಿ ಮೋದಿ ಹೇಳಿಕೆ
  • ರಾಷ್ಟ್ರಪತಿ ಚುನಾವಣೆಯೂ ನಡೆಯುತ್ತಿರುವುದರಿಂದ ಈ ಅಧಿವೇಶನ ಮಹತ್ವ ಪಡೆದಿದೆ
"ಇದು ಸ್ವಾತಂತ್ರ್ಯದ ಅಮೃತೋತ್ಸವದ ಯುಗ": ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ title=
Monsoon session

ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಅದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, "ಸದನದ ಹೊರಗೆ ಬಿಸಿಲಿರುತ್ತದೆ. ಆದರೆ ಒಳಗೆ ಶಾಖ ಕಡಿಮೆಯಾಗುತ್ತದೆಯೋ ಇಲ್ಲವೋ ಎಂದು ನೋಡಬೇಕಿದೆ. ಎಲ್ಲರೂ ಸದನದ ಘನತೆ ಕಾಪಾಡಬೇಕು" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಅಡುಗೆ ಎಣ್ಣೆ ಕೊಟ್ಟರೆ ಬದಲಿಗೆ ಸಿಗುತ್ತೆ ಬಿಯರ್! ಎಲ್ಲಿ ಗೊತ್ತಾ?

ಇಂದು ರಾಷ್ಟ್ರಪತಿ ಚುನಾವಣೆಯೂ ನಡೆಯುತ್ತಿರುವುದರಿಂದ ಈ ಅಧಿವೇಶನ ಮಹತ್ವ ಪಡೆದಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ನೂತನ ಅಧ್ಯಕ್ಷರು ಹಾಗೂ ನೂತನ ಉಪಾಧ್ಯಕ್ಷರ ಮಾರ್ಗದರ್ಶನ ಪಡೆಯಲಾಗುವುದು. ಸದನದಲ್ಲಿ ಮುಕ್ತ ಮನಸ್ಸಿನ ಚರ್ಚೆ ನಡೆಯಬೇಕು. ಸದನವು ಸಂವಹನದ ಮಾಧ್ಯಮವಾಗಿದೆ. ಎಲ್ಲಿ ಬೇಕಾದರೂ ಚರ್ಚೆಯಾಗಬೇಕು ಎಂದರು. 

ಎಲ್ಲಾ ಸಂಸದರು ಆಳವಾಗಿ ಆಲೋಚಿಸಿ ಚರ್ಚಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ. ಸಂಸತ್ತಿನಲ್ಲಿ ಮುಕ್ತ ಮನಸ್ಸಿನ ಸಂವಾದ ನಡೆಯಬೇಕು. ಚರ್ಚೆಯೂ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

"ಈ ಸಮಯ ಬಹಳ ಮಹತ್ವದ್ದಾಗಿದೆ. ಇದು ಸ್ವಾತಂತ್ರ್ಯದ ಅಮೃತೋತ್ಸವದ ಯುಗ. ಆಗಸ್ಟ್ 15 ಮತ್ತು ಮುಂಬರುವ 25 ವರ್ಷಗಳು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿವೆ" ಎಂದರು.

ಮುಂಗಾರು ಅಧಿವೇಶನದ ಪ್ರಾಮುಖ್ಯತೆ:
ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಈ ಅಧಿವೇಶನವೂ ಮಹತ್ವದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಈ ಸಮಯದಲ್ಲಿ, ಹೊಸ ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರು ದೇಶಕ್ಕೆ ಮಾರ್ಗದರ್ಶನ ನೀಡಲು ಪ್ರಾರಂಭಿಸುತ್ತಾರೆ ಎಂದರು. 

ಇದನ್ನೂ ಓದಿ: ITR Filing: ಆದಾಯ ತೆರಿಗೆ ರಿಟರ್ನ್‌ನಲ್ಲಿ ಪೂರ್ಣ ಹಣ ಬಂದಿಲ್ಲವೇ?

ಇಂದು ರಾಷ್ಟ್ರಪತಿ ಚುನಾವಣೆ: 
2022ರ ರಾಷ್ಟ್ರಪತಿ ಚುನಾವಣೆ ಮತದಾನವು ಇಂದು ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭವಾಗಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ಕಣಕ್ಕಿಳಿದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News