ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಹೆಚ್ಚಿದ ಬೀಗಿ ಭದ್ರತೆ

370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೇಟಿಯ ಮುನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ.

Written by - Zee Kannada News Desk | Last Updated : Apr 24, 2022, 12:48 AM IST
  • ಜಮ್ಮುವಿನ ಸುಜ್ವಾನ್ ಪ್ರದೇಶದಲ್ಲಿ ಇಬ್ಬರು ಜೆಎಂ ಫಿದಾಯೀನ್‌ಗಳನ್ನು ಹೊಡೆದುರುಳಿಸಿದಾಗ, ದೀರ್ಘಕಾಲ ಬದುಕುಳಿದಿರುವ ಉಗ್ರಗಾಮಿ ಕಮಾಂಡರ್‌ಗಳಲ್ಲಿ ಒಬ್ಬರಾದ ಯೂಸುಫ್ ಕಾಂಟ್ರೂ ಹತ್ಯೆಯಾಗಿದ್ದರು.
ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಹೆಚ್ಚಿದ ಬೀಗಿ ಭದ್ರತೆ title=

ನವದೆಹಲಿ: 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಭೇಟಿಯ ಮುನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ  ಎಲ್ಲಾ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸ್ಥಳಗಳಲ್ಲಿ ಬಹು-ಪದರದ ಚೆಕ್ ಪಾಯಿಂಟ್‌ಗಳನ್ನು ಇರಿಸಲಾಗಿದೆ.ಇದಲ್ಲದೇ ಕಳೆದ ಎರಡು ದಿನಗಳಿಂದ ಕಾಶ್ಮೀರದ ವಿವಿಧೆಡೆ ದಿಢೀರ್ ತಪಾಸಣೆ ನಡೆಸಲಾಗುತ್ತಿದೆ.ಕಳೆದ ಮೂರು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ಉಗ್ರರ ದಾಳಿ ಹಠಾತ್ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

ಶಾಂತಿ ವಾತಾವರಣಕ್ಕೆ ಭಂಗ ತರಲು ಯಾವುದೇ ದೇಶ ವಿರೋಧಿ ಶಕ್ತಿಗಳು ಅಡ್ಡಿಯಾಗದಂತೆ ನೋಡಿಕೊಳ್ಳಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ವೈಮಾನಿಕ ಕಣ್ಗಾವಲು ಗ್ರಿಡ್, ಡ್ರೋನ್‌ಗಳು ಮತ್ತು ಶಾರ್ಪ್‌ಶೂಟರ್‌ಗಳನ್ನು ಪ್ರಧಾನಿಯವರ ರ್ಯಾಲಿ ಸ್ಥಳದ ತ್ರಿಜ್ಯದಲ್ಲಿ ಇರಿಸಲಾಗುವುದು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಇತರ ಭದ್ರತಾ ಪಡೆಗಳು ಅವಳಿ ಪ್ರಮುಖ ಕಾರ್ಯಾಚರಣೆಗಳಲ್ಲಿ ಕಳೆದ ಎರಡು ದಿನಗಳಲ್ಲಿ ಬಾರಾಮುಲ್ಲಾ ಮತ್ತು ಜಮ್ಮುವಿನಲ್ಲಿ ಐವರು ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: PM Narendra Modi : ಪ್ರಧಾನಿ ಮೋದಿಗೆ 'ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ'

ಜಮ್ಮುವಿನ ಸುಜ್ವಾನ್ ಪ್ರದೇಶದಲ್ಲಿ ಇಬ್ಬರು ಜೆಎಂ ಫಿದಾಯೀನ್‌ಗಳನ್ನು ಹೊಡೆದುರುಳಿಸಿದಾಗ, ದೀರ್ಘಕಾಲ ಬದುಕುಳಿದಿರುವ ಉಗ್ರಗಾಮಿ ಕಮಾಂಡರ್‌ಗಳಲ್ಲಿ ಒಬ್ಬರಾದ ಯೂಸುಫ್ ಕಾಂಟ್ರೂ ಹತ್ಯೆಯಾಗಿದ್ದರು.

ಪ್ರಧಾನಮಂತ್ರಿಯವರು 20 ಸಾವಿರ ಕೋಟಿ ರೂ.ಗಳ ಯೋಜನೆ ಉದ್ಘಾಟನೆ

ಕೇಂದ್ರಾಡಳಿತ ಪ್ರದೇಶದ ಎರಡು ಪ್ರದೇಶಗಳ ನಡುವೆ ಸರ್ವಋತು ಸಂಪರ್ಕವನ್ನು ಸ್ಥಾಪಿಸಲು ಬನಿಹಾಲ್-ಖಾಜಿಗುಂಡ್ ರಸ್ತೆ ಸುರಂಗ ಮಾರ್ಗವನ್ನು ತೆರೆಯುವುದು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ 20,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಮತ್ತು ದೇಶಾದ್ಯಂತ 'ಗ್ರಾಮ ಸಭೆ'ಗಳನ್ನು ಉದ್ದೇಶಿಸಿ ಮಾತನಾಡಲು ಮೋದಿ ಅಲ್ಲಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಹೇಳಿಕೆಯಲ್ಲಿ ತಿಳಿಸಿದೆ.ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸಲು ಮತ್ತು ಪುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತಿರುವ ಪ್ರಧಾನಿಯವರು 'ಅಮೃತ ಸರೋವರ' ಎಂಬ ಹೊಸ ಉಪಕ್ರಮವನ್ನು ಪ್ರಾರಂಭಿಸಲಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ : "ಕಂಡಿಡಿ ನೋಡನ"ದಲ್ಲಿದೆಯಂತೆ ವಿಭಿನ್ನ ಕ್ಲೈಮ್ಯಾಕ್ಸ್...ಏನದು..!?

ನಂತರ ಮುಂಬೈನಲ್ಲಿ ನಡೆಯಲಿರುವ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋದಿ ಅವರು ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅನುಕರಣೀಯ ಕೊಡುಗೆ ನೀಡಿದ ವ್ಯಕ್ತಿಗೆ ಪ್ರತಿ ವರ್ಷ ನೀಡಲಾಗುವುದು ಎಂದು ಅದು ಹೇಳಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News