ನವದೆಹಲಿ : Pragyan Bharati Scheme 2021 - ಬಾಲಕಿಯರ ಶಿಕ್ಷಣಕ್ಕೆ ಮಹತ್ವ ನೀಡಿರುವ ಅಸ್ಸಾಂ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ಭರವಸೆಯ ಬಾಲಕಿಯರನ್ನು ಪ್ರೋತ್ಸಾಹಿಸುವುದು, ಯಾವುದೇ ಮಗು ವಿದ್ಯೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಆರ್ಥಿಕ ಸಹಾಯ ನೀಡುವುದು ಮತ್ತು ಅರ್ಹ ಯುವತಿಯರಿಗೆ ಸ್ಕೂಟರ್ ನೀಡುವುದು ಮುಂತಾದ ಯೋಜನೆಗಳು ಇದರಲ್ಲಿ ಸೇರಿವೆ.
12ನೇ ತರಗತಿಯಲ್ಲಿ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದ ಯುವತಿಯರಿಗೆ ರಾಜ್ಯ ಸರ್ಕಾರ ಉಚಿತ ಸ್ಕೂಟರ್ ನೀಡುತ್ತಿದೆ. ಅಷ್ಟೇ ಅಲ್ಲ ಪ್ರತಿದಿನ ಶಾಲೆಗೆ ಹೋಗಲು ಹುಡುಗಿಯರನ್ನು ಉತ್ತೇಜಿಸಲು ಆರ್ಥಿಕ ಸಹಾಯವನ್ನೂ ನೀಡಲಾಗುತ್ತಿದೆ.
ಬಾಲಕಿಯರು ನಿಯಮಿತವಾಗಿ ತರಗತಿಗಳಿಗೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಸ್ಕೂಟರ್ ಮತ್ತು ಆರ್ಥಿಕ ಪ್ರೋತ್ಸಾಹ ನೀಡಲಿದೆ ಎಂದು ಅಸ್ಸಾಂ (Assam) ಶಿಕ್ಷಣ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದರು.
12ನೇ ತರಗತಿಯ ಪ್ರಥಮ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ (Students) ರಾಜ್ಯ ಸರ್ಕಾರ ಪ್ರಜ್ಞಾನ್ ಭಾರತಿ ಸ್ಕೂಟಿ ಯೋಜನೆಯಡಿ 22,000 ದ್ವಿಚಕ್ರ ವಾಹನಗಳನ್ನು ವಿತರಿಸುತ್ತಿದೆ ಎಂದು ಹಿಮಂತ್ ಬಿಸ್ವಾ ಶರ್ಮಾ ಹೇಳಿದರು. ರಾಜ್ಯ ಸರ್ಕಾರದ ಈ ಯೋಜನೆಗೆ 144.30 ಕೋಟಿ ರೂ. ವೆಚ್ಚವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು ?
ಈ ಸಂಖ್ಯೆ ಒಂದು ಲಕ್ಷ ದಾಟಿದರೂ ರಾಜ್ಯ ಮಂಡಳಿಯಿಂದ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸ್ಕೂಟರ್ ನೀಡಲಿದೆ ಎಂದು ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ.
2018 ಮತ್ತು 2019ರಲ್ಲಿ 12ನೇ ತರಗತಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಲ್ಲ ಬಾಲಕಿಯರಿಗೂ ಸ್ಕೂಟರ್ ನೀಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ಎಲ್ಲ ಬಾಲಕಿಯರಿಗೆ ಆರ್ಥಿಕ ಪ್ರೋತ್ಸಾಹ ಧನ ನೀಡಲಾಗುವುದು ಮತ್ತು ಈ ತಿಂಗಳ ಅಂತ್ಯದ ವೇಳೆಗೆ ಈ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದರು.
ಶಾಲೆಗೆ ಹೋಗುವ ಎಲ್ಲ ಬಾಲಕಿಯರಿಗೆ ಅಸ್ಸಾಂ ಸರ್ಕಾರ (Assam Government) ಪುಸ್ತಕಗಳು, ಸಮವಸ್ತ್ರ ಮತ್ತು ಇತರ ಪಠ್ಯ ಸಾಮಗ್ರಿಗಳನ್ನು ಒದಗಿಸುತ್ತಿದೆ. ಪುಸ್ತಕಗಳಿಗೆ 1000 ರೂ. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪುಸ್ತಕಗಳಿಗೆ 1,500 ರೂ. ಮತ್ತು 2,000 ರೂ. ನೀಡಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ : ಬ್ರಿಟನ್ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಕರ್ಟ್ ಬದಲಿಗೆ ಪ್ಯಾಂಟ್ ಧರಿಸುವ ಪ್ರಸ್ತಾಪ
ಹಾಸ್ಟೆಲ್ಗಳಲ್ಲಿ ವಾಸಿಸುವ ಬಾಲಕಿಯರಿಗೆ ಪ್ರತಿ ತಿಂಗಳು ಕ್ಯಾಂಟೀನ್ ವೆಚ್ಚಕ್ಕಾಗಿ 1000 ರೂ. ನೀಡಲಾಗುವುದು.
ಈ ಯೋಜನೆಯನ್ನು ಕಳೆದ ವರ್ಷವೇ ಪ್ರಾರಂಭಿಸಬೇಕಾಗಿತ್ತು. ಆದರೆ ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ಇದು ವಿಳಂಬವಾಗಿದೆ ಎಂದು ಹೇಳಿದರು.
ಈ ಯೋಜನೆಯ ಲಾಭ ಯಾರಿಗೆ ಸಿಗಲಿದೆ?
- ಈ ಯೋಜನೆ ಅಸ್ಸಾಂನಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹುಡುಗಿಯರಿಗೆ ಮಾತ್ರ.
- ಈ ಯೋಜನೆ ಹುಡುಗಿಯರಿಗೆ ಮಾತ್ರ.
- ಫಲಾನುಭವಿಯು ಅಸ್ಸಾಂನ ನಿವಾಸಿಯಾಗಿರಬೇಕು.
- ಅಸ್ಸಾಂ ಮಂಡಳಿಯ 12 ನೇ ತರಗತಿಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗುವುದು ಅಗತ್ಯ
- ಫಲಾನುಭವಿಯು ಅಸ್ಸಾಂ ಸರ್ಕಾರಿ ಶಾಲೆಯ ವಿದ್ಯಾರ್ಥಿಯಾಗಿರಬೇಕು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.