PM Modi Visit to Morbi: ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚು ನದಿಗೆ ಅಡ್ಡವಾಗಿ ಕಟ್ಟಿರುವ ತೂಗು ಸೇತುವೆ ಕುಸಿದು ಸುಮಾರು 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೆ ಈಗಾಗಲೇ 177 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಈಗಾಗಲೇ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಗುಜರಾತ್‌ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು 60 ಜನರು ಸಾವು
ಇನ್ನು ಗುಜರಾತ್ ಸರ್ಕಾರ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಿಂದ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಹೇಳಿದ್ದಾರೆ.
ಇನ್ನು ಗುಜರಾತ್‌ನ ಮೊರ್ಬಿಯಲ್ಲಿ ಸೇತುವೆ ಕುಸಿದ ಘಟನೆಗೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಸಂತಾಪ ಸೂಚಿಸಿದ್ದಾರೆ. “ಗುಜರಾತ್‌ನ ಮೋರ್ಬಿಯಲ್ಲಿ ಸೇತುವೆ ಕುಸಿದು ಬಿದ್ದ ದುರಂತ ಘಟನೆಯಿಂದ ನನಗೆ ಅತೀವ ದುಃಖವಾಗಿದೆ” ಎಂದು ಹೇಳಿದರು.
ಗುಜರಾತ್ ನಲ್ಲಿ ಸಂಭವಿಸಿದ ಈ ಘಟನೆಗೆ ಮನನೊಂದಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ಮೋರ್ಬಿಗೆ ಭೇಟಿ ನೀಡಲಿದ್ದಾರೆ. ಸ್ಥಳಕ್ಕೆ ಭೇಟಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ,
ರಾಜ್ಯದ ರಾಜಧಾನಿ ಅಹಮದಾಬಾದ್ ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಮೊರ್ಬಿಯಲ್ಲಿ ಮಚ್ಚು ನದಿಯಲ್ಲಿ ಈ ಘಟನೆ ನಡೆದಿದೆ. ಸದ್ಯ ಪರಿಹಾರ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗುಜರಾತ್ ಸರ್ಕಾರ ಅಪಘಾತಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.
ಇದನ್ನೂ ಓದಿ: EXCLUSIVE : ನೂರಾರು ಜೀವಗಳ ಬಲಿ ಪಡೆದ ಮೋರ್ಬಿ ಸೇತುವೆಯ ಕುಸಿತದ ವಿಡಿಯೋ ನೋಡಿ..!
ಸ್ಥಳೀಯ ಶಾಸಕ ಲಲಿತ್ ಮಾತನಾಡಿ, “ಚುನಾವಣೆ ಹಿನ್ನೆಲೆಯಲ್ಲಿ 6 ತಿಂಗಳ ಹಿಂದೆಯಷ್ಟೇ ಮೇಲ್ಸೇತುವೆ ಉದ್ಘಾಟನೆಯಾಗಿದೆ. ತರಾತುರಿಯಲ್ಲಿ ಕಾಮಗಾರಿ ನಡೆದಿದ್ದು, ಸೂಕ್ತ ಪರಿಶೀಲನೆ ನಡೆಸಿಲ್ಲ” ಎಂದು ಕಟುವಾಗಿ ಆರೋಪಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ