ಜೂನ್ 19 ರಂದು ಭಾರತ-ಚೀನಾ ವಿಷಯ ಚರ್ಚಿಸಲು ಪ್ರಧಾನಿ ಮೋದಿಯಿಂದ ಸರ್ವಪಕ್ಷ ಸಭೆ

ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಚೀನಾ ಗಡಿ ಸಮಸ್ಯೆ ಕುರಿತು ಚರ್ಚಿಸಲು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸೋಮವಾರ ರಾತ್ರಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ (ಎಲ್‌ಎಸಿ) ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಹಿಂಸಾತ್ಮಕ ಮುಖಾಮುಖಿಯಾದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. 

Last Updated : Jun 17, 2020, 08:49 PM IST
 ಜೂನ್ 19 ರಂದು ಭಾರತ-ಚೀನಾ ವಿಷಯ ಚರ್ಚಿಸಲು ಪ್ರಧಾನಿ ಮೋದಿಯಿಂದ ಸರ್ವಪಕ್ಷ ಸಭೆ title=
file photo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಚೀನಾ ಗಡಿ ಸಮಸ್ಯೆ ಕುರಿತು ಚರ್ಚಿಸಲು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸೋಮವಾರ ರಾತ್ರಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ (ಎಲ್‌ಎಸಿ) ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಹಿಂಸಾತ್ಮಕ ಮುಖಾಮುಖಿಯಾದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. 

ಈ ಕುರಿತಾಗಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದ್ದು, 'ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ವರ್ಚುವಲ್ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸುತ್ತಾರೆ' ಎಂದು ತಿಳಿಸಿದೆ. 

ಜೂನ್ 19 ರಂದು ಸಂಜೆ 5 ಗಂಟೆಗೆ ವರ್ಚುವಲ್ ಸಭೆ ನಡೆಯಲಿದ್ದು, ಪೂರ್ವ ಲಡಾಖ್‌ನಲ್ಲಿ ಪೆಟ್ರೋಲಿಂಗ್ ಪಾಯಿಂಟ್ ಸಂಖ್ಯೆ 14 ರಲ್ಲಿರುವ ಭಾರತೀಯ ಪಡೆಗಳು ಮತ್ತು ಚೀನಾದ ಪಿಎಲ್‌ಎ ಸೈನಿಕರ ನಡುವಿನ ಮುಖಾಮುಖಿ ಕುರಿತು ಚರ್ಚಿಸಲಾಗುವುದು. ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಚೀನಾಕ್ಕೆ ಪಾಠ ಕಲಿಸಲು ಭಾರತದ ಮುಂದಿವೆ 5 ಆಯ್ಕೆಗಳು

ಚೀನಾದ ಪಿಎಲ್‌ಎಯಿಂದ ಭಾರತೀಯ ಸೇನಾ ಸಿಬ್ಬಂದಿಯ ಮೇಲೆ ಸೋಮವಾರ ರಾತ್ರಿ ನಡೆದ ದಾಳಿ ಸುಮಾರು ಆರರಿಂದ ಏಳು ಗಂಟೆಗಳ ಕಾಲ ಮುಂದುವರೆಯಿತು. ವರದಿಗಳ ಪ್ರಕಾರ, ಲಡಾಖ್ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ದಾಳಿ ನಡೆದ ಸ್ಥಳದಿಂದ ಶವಗಳನ್ನು ಮತ್ತು ಗಾಯಗೊಂಡ ಭಾರತೀಯ ಸೇನಾ ಸಿಬ್ಬಂದಿಯನ್ನು ಸ್ಥಳಾಂತರಿಸಲು ಮಂಗಳವಾರ 16 ಬಾರಿ ಹಾರಾಟ ನಡೆಸಿದ್ದವು. 

Trending News