ನವದೆಹಲಿ: ಹವಾಮಾನ ಬದಲಾವಣೆಯಿಂದ ದೇಶದ ಹಲವು ಪ್ರದೇಶಗಳಲ್ಲಿ ಕೆಲವು ವಾರಗಳಿಂದ ಬಿರುಗಾಳಿ ಬೀಸುತ್ತಿದೆ. ಇದರಿಂದ ಜೀವ ಮತ್ತು ಆಸ್ತಿಪಾಸ್ತಿಗೆ ಹಾನಿ ಉಂಟಾಗುತ್ತಿದೆ. ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳು ಪ್ರಕೃತಿಯೊಂದಿಗೆ ಹೋರಾಡುವುದನ್ನು ಕಲಿಸಿಲ್ಲ. ಬದಲಿಗೆ ಅದರೊಂದಿಗೆ ಸಾಮರಸ್ಯದಿಂದ ಬದುಕುವುದನ್ನು ಕಲಿಸಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತಿಳಿಸಿದರು.
ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಮತ್ತು ಪಾಲಿಥಿನ್ ಗಳು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮವನ್ನುಂಟು ಮಾಡುತ್ತದೆ. ಹಾಗಾಗಿ ಯಾರೂ ಕಡಿಮೆ ಗುಣಮಟ್ಟದ ಕಡಿಮೆ ಗುಣಮಟ್ಟದ ಪ್ಲಾಸ್ಟಿಕ್ ಮತ್ತು ಪಾಲಿಥಿನ್ಗಳನ್ನು ಉಪಯೋಗಿಸಬೇಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.
ವಿಶ್ವ ಪರಿಸರ ದಿನವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಜಾಗತಿಕ ಮಟ್ಟದಲ್ಲಿ ಆಚರಿಸುವ ಹೊಣೆ ಭಾರತಕ್ಕೆ ಲಭಿಸಿದೆ. ಹವಾಮಾನ ಬದಲಾವಣೆಯ ವಿರುದ್ಧ ಹೋರಾಡುವಲ್ಲಿ ಭಾರತದ ಬೆಳೆಯುತ್ತಿರುವ ನಾಯಕತ್ವ ಸಮರ್ಥವಾಗಿ ನಿಭಾಯಿಸಬಲ್ಲದು. ‘Beat Plastic Pollution’ (ಪ್ಲಾಸ್ಟಿಕ್ಮುಕ್ತಗೊಳಿಸುವುದೇ) ಇದರ ಧ್ಯೇಯ ಎಂದು ಪ್ರಧಾನಿ ತಿಳಿಸಿದರು.
World Environment Day ವೆಬ್ಸೈಟ್ ವೆಡ್-ಇಂಡಿಯಾ -2018 ಕ್ಕೆ ಭೇಟಿ ನೀಡಿ, ಅಲ್ಲಿ ಅನೇಕ ಸಲಹೆಗಳನ್ನು ತುಂಬಾ ಆಸಕ್ತಿದಾಯಕವಾಗಿ ನೀಡಲಾಗುತ್ತದೆ - ನೋಡಿ, ಕಲಿಯಿರಿ ಮತ್ತು ಅವರ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ ಎಂದು ಇದೇ ಸಮಯದಲ್ಲಿ ಮೋದಿ ಹೇಳಿದರು.