ನವದೆಹಲಿ: ಇಂದು ಬೆಳಗ್ಗೆ ಉಕ್ರೇನ್ನ (Ukraine) ಖಾರ್ಕಿವ್ನಲ್ಲಿ ಶೆಲ್ ದಾಳಿಗೆ ಬಲಿಯಾದ ಭಾರತೀಯ ವಿದ್ಯಾರ್ಥಿ ನವೀನ್ ಶೇಖರಪ್ಪ (Naveen Shekharappa) ಅವರ ತಂದೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಇದನ್ನೂ ಓದಿ: ರಷ್ಯಾದ ಕ್ಷಿಪಣಿ ದಾಳಿಗೆ ಹೊತ್ತಿ ಉರಿದ ಉಕ್ರೇನ್ ಸರ್ಕಾರದ ಮುಖ್ಯಕಚೇರಿ
ದಿನ ಕಳೆದಂತೆ ಉಕ್ರೇನ್ ನಲ್ಲಿನ ಪರಿಸ್ಥಿತಿ ಉದ್ವಿಗ್ನಗೋಳ್ಳುತ್ತಲೇ ಇದೆ. ರಷ್ಯಾ (Russia) ದಾಳಿಗೆ ಅಲ್ಲಿನ ಜನತೆ ಭಯ ಭೀತರಾಗಿದ್ದಾರೆ. ಸಾವಿರಾರು ಭಾರತೀಯರು ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರಲ್ಲಿ ಕನ್ನಡಿಗರೂ ಇದ್ದಾರೆ.
ಉಕ್ರೇನ್ನಲ್ಲಿ ಸಿಲುಕಿಹಾಕಿಕೊಂಡಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪಶ್ಚಿಮ ಗಡಿಯನ್ನು ತಲುಪಲು ಎಲ್ವಿವ್ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಗುಂಡು ತಗುಲಿ ಮೃತಪಟ್ಟಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ (PM Modi) ಉಕ್ರೇನ್ ನಲ್ಲಿ ದಾಳಿಗೊಳಗಾಗಿ ಮೃತ ಪಟ್ಟ ನವೀನ ಗ್ನ್ಯಾನ ಗೌಡರ ತಂದೆ ಶೇಖರಪ್ಪ ಜೊತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್ ಅನ್ನೇ ಏಕೆ ಆಯ್ಕೆ ಮಾಡುತ್ತಾರೆ?
ಮಗನನ್ನು ಕಳೆದುಕೊಂಡಿರುವ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇದ್ದೊಬ್ಬ ಮಗನನ್ನು ಕಳೆದುಕೊಂಡು ಪುತ್ರ ಶೋಕದಿಂದ ಪೋಷಕರು ಮರುಗುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.