India Gate ಬಳಿ Subhash Chandra ಹೊಲೋಗ್ರಾಮ್ ಛಾಯಾ ಪ್ರತಿಮೆ ಅನಾವರಣಗೊಳಿಸಿದ PM Modi ಹೇಳಿದ್ದೇನು?

PM Modi Unveiled Hologram Statue Of Netaji: ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಬೋಸ್ ಅವರ ಹೊಲೊಗ್ರಾಮ್ ಛಾಯಾ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅವರು 23 ಜನವರಿ 1897 ರಂದು ಜನಿಸಿದ್ದರು.

Written by - Nitin Tabib | Last Updated : Jan 23, 2022, 07:06 PM IST
  • ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಬೋಸ್ ಅವರ ಹೊಲೊಗ್ರಾಮ್ ಛಾಯಾ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ.
  • ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು 'ಪರಾಕ್ರಮ್ ದಿವಸ್' ಪ್ರಯುಕ್ತ ಜನತೆಗೆ ಶುಭಾಶಯ ಕೋರಿದ್ದಾರೆ.
  • ಆಜಾದ್ ಹಿಂದ್ ಫೌಜ್ ಸಂಸ್ಥಾಪಕ ಬೋಸ್ ಅವರ ಜನ್ಮದಿನವನ್ನು 'ಪರಾಕ್ರಮ್ ದಿವಸ್' ಎಂದು ಆಚರಿಸಲಾಗುವುದು ಎಂದು ಈಗಾಗಲೇ ಸರ್ಕಾರ ಘೋಷಿಸಿದೆ.
India Gate ಬಳಿ Subhash Chandra ಹೊಲೋಗ್ರಾಮ್ ಛಾಯಾ ಪ್ರತಿಮೆ ಅನಾವರಣಗೊಳಿಸಿದ PM Modi ಹೇಳಿದ್ದೇನು? title=
PM Modi Unveiled Hologram Statue Of Netaji (File Photo)

Hologram Statue of Netaji: ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಬೋಸ್ ಅವರ ಹೊಲೊಗ್ರಾಮ್ ಛಾಯಾ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅವರು 23 ಜನವರಿ 1897 ರಂದು ಜನಿಸಿದ್ದರು. ಇದಕ್ಕೂ ಮುನ್ನ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶಕ್ಕೆ ಅವರು ನೀಡಿದ ಮಹತ್ವದ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆಪಡುತ್ತಾರೆ ಎಂದು ಭಾನುವಾರಹೇಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು 'ಪರಾಕ್ರಮ್ ದಿವಸ್' ಪ್ರಯುಕ್ತ ಜನತೆಗೆ ಶುಭಾಶಯ ಕೋರಿದ್ದಾರೆ. ಆಜಾದ್ ಹಿಂದ್ ಫೌಜ್ ಸಂಸ್ಥಾಪಕ ಬೋಸ್ ಅವರ ಜನ್ಮದಿನವನ್ನು 'ಪರಾಕ್ರಮ್ ದಿವಸ್' ಎಂದು ಆಚರಿಸಲಾಗುವುದು ಎಂದು ಈಗಾಗಲೇ ಸರ್ಕಾರ ಘೋಷಿಸಿದೆ. 'ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ನಾನು ಅವರಿಗೆ ನಮಸ್ಕರಿಸುತ್ತೇನೆ' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ನಮ್ಮ ದೇಶಕ್ಕೆ ಅವರು ನೀಡಿದ ಮಹತ್ವದ ಕೊಡುಗೆಯ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ ಎಂದು ಪ್ರಧಾನಿ ಹೇಳಿದ್ದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದ ಮೊದಲು, ದೇಶದ ಈ ಮಹಾನ್ ಪುತ್ರನಿಗೆ ಕೃತಜ್ಞತೆಯ ಸಂಕೇತವಾಗಿ ಇಂಡಿಯಾ ಗೇಟ್‌ನಲ್ಲಿ ಅವರ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಘೋಷಿಸಿದ್ದರು. ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಯ ಜ್ವಾಲೆಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಉರಿಯುತ್ತಿರುವ ಜ್ವಾಲೆಯೊಂದಿಗೆ ವಿಲೀನಗೊಳಿಸಿ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಸಮಯದಲ್ಲಿ ಪ್ರಧಾನಿಯವರ ಈ ಘೋಷಣೆ ಬಂದಿರುವುದು ಇಲ್ಲಿ ಉಲ್ಲೇಖನೀಯ.

ಇದನ್ನೂ ಓದಿ-Exclusive : ಕಾಂಗ್ರೆಸ್‌ನ ಒಂದು ವಿಭಾಗ ನನ್ನ ತಂದೆಗೆ ಅನ್ಯಾಯ ಮಾಡಿದೆ : ಬೋಸ್ ಮಗಳ ಆರೋಪ

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, “ದೇಶವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಇಂಡಿಯಾ ಗೇಟ್‌ನಲ್ಲಿ ಅವರ ಭವ್ಯವಾದ ಗ್ರಾನೈಟ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ನಿಮ್ಮೊಂದಿಗೆ ಹಂಚಿಕೊಳ್ಳಲು ನನಗೆ ಸಂತೋಷವಾಗುತ್ತಿದೆ. ಇದು ಅವರಿಗೆ ದೇಶದ ಕೃತಜ್ಞತೆಯ ಸಂಕೇತವಾಗಲಿದೆ" ಎಂದಿದ್ದರು. ನೇತಾಜಿ ಅವರ ಗ್ರಾನೈಟ್ ಪ್ರತಿಮೆ ಸಿದ್ಧವಾಗುವವರೆಗೆ ಆ ಸ್ಥಳದಲ್ಲಿ ಅವರ ಹೊಲೊಗ್ರಾಮ್ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ಹೇಳಿದ್ದರು.

ಇದನ್ನೂ ಓದಿ-Narendra Modi : ಇಂಡಿಯಾ ಗೇಟ್‌ನಲ್ಲಿ ಸ್ಥಾಪನೆಯಾಗಲಿದೆ 'ಸುಭಾಷ್ ಚಂದ್ರ ಬೋಸ್ ಪ್ರತಿಮೆ'..! 

ನೇತಾಜಿಯವರ ಗ್ರಾನೈಟ್ ಪ್ರತಿಮೆಯು 28 ಅಡಿ ಎತ್ತರ ಮತ್ತು ಆರು ಅಡಿ ಅಗಲವನ್ನು ಹೊಂದಿದ್ದು, 1968 ರಲ್ಲಿ ತೆಗೆದುಹಾಕಲಾದ ಕಿಂಗ್ ಜಾರ್ಜ್ V ರ ಪ್ರತಿಮೆ ಇದ್ದ ಪೆವಿಲಿಯನ್‌ನಲ್ಲಿ ಸ್ಥಾಪಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಉರಿಯುತ್ತಿರುವ ಜ್ವಾಲೆಯೊಂದಿಗೆ ಅಮರ್ ಜವಾನ್ ಜ್ಯೋತಿ ಜ್ವಾಲೆಯನ್ನು ವಿಲೀನಗೊಳಿಸುವ ಟೀಕೆಗಳ ಹಿನ್ನೆಲೆಯಲ್ಲಿ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರದ ಅಮರ್ ಜವಾನ್ ಜ್ಯೋತಿಯನ್ನು ನಂದಿಸಲಾಗುತ್ತಿಲ್ಲ,  ಆದರೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಬೆಳಗಿಸಲಾಗುತ್ತಿದೆ ಎಂದು ಹೇಳಿತ್ತು. ಏಳು ದಶಕಗಳಲ್ಲಿ ಯಾವುದೇ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ನಿರ್ಮಿಸದ ಜನರು ಇಂದು ಹುತಾತ್ಮರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸುವ ಸಂದರ್ಭದಲ್ಲಿ ಗಲಾಟೆ ಮಾಡುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿದ್ದವು.

ಇದನ್ನೂ ಓದಿ-'Nethaji Bose ಸಾವಿಗೆ ಕಾರಣ ಕಾಂಗ್ರೆಸ್', ಮತ್ತೊಂದು ವಿವಾದಕ್ಕೆ ಕಾರಣವಾದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News