ಜೂನ್ 16 ಮತ್ತು 17 ರಂದು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ

ಮುಂದಿನ ವಾರ ಜೂನ್ 16 ಮತ್ತು 17 ರಂದು ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಯಲಿದೆ.ದೇಶಾದ್ಯಂತ ಕರೋನವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಈ ಸಭೆ ನಡೆಯಲಿದೆ.

Last Updated : Jun 12, 2020, 09:53 PM IST
ಜೂನ್ 16 ಮತ್ತು 17 ರಂದು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ  title=
file photo

ನವದೆಹಲಿ: ಮುಂದಿನ ವಾರ ಜೂನ್ 16 ಮತ್ತು 17 ರಂದು ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಯಲಿದೆ.ದೇಶಾದ್ಯಂತ ಕರೋನವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಈ ಸಭೆ ನಡೆಯಲಿದೆ.

ಲಾಕ್‌ಡೌನ್‌ನ ನಾಲ್ಕನೇ ಹಂತವು ಮುಕ್ತಾಯಗೊಳ್ಳುತ್ತಿದ್ದಂತೆ, ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯಗಳನ್ನು ಕಲೆ ಹಾಕಿದ್ದರು. ಈಗ ಕೊರೊನಾ ವೈರಸ್ ಬಿಕ್ಕಟ್ಟು ತೀವ್ರವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಮತ್ತೊಮ್ಮೆ ವಿವಿಧ ರಾಜ್ಯಗಳ ಸಿಎಂಗಳ ಜೊತೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ : ಲಾಕ್‌ಡೌನ್‌ ವಿಫಲವಾಗುತ್ತಿದ್ದಂತೆ ಹಿನ್ನೆಲೆಗೆ ಸರಿದ ಮೋದಿ: ರಾಹುಲ್ ಗಾಂಧಿ ವಾಗ್ಧಾಳಿ

ಕೇವಲ ಎರಡು ವಾರಗಳ ನಂತರ ಕೇಂದ್ರವು ರಾಷ್ಟ್ರವ್ಯಾಪಿ ಲಾಕ್‌ಡೌನ್ ಅನ್ನು ಹಂತಗಳಲ್ಲಿ ತೆಗೆದುಹಾಕುವುದಾಗಿ ಘೋಷಿಸಿ ಅದನ್ನು ಅನ್ಲಾಕ್ 1 ಎಂದು ಘೋಷಿಸಿದ ನಂತರ ದೇಶದಲ್ಲಿ ಕರೋನವೈರಸ್ ಪ್ರಕರಣಗಳು ಮೂರು ಲಕ್ಷ  ಮೈಲಿಗಲ್ಲನ್ನು ದಾಟಿದೆ,

ಭಾರತದಲ್ಲಿ ಅತಿ ಹೆಚ್ಚು ಕೋವಿಡ್ -19 ಧನಾತ್ಮಕ ಪ್ರಕರಣಗಳು ಮಹಾರಾಷ್ಟ್ರ (1,01,141)  ತಮಿಳುನಾಡು (40,698) ಮತ್ತು ದೆಹಲಿಯಲ್ಲಿ ( 34,687) ದಾಖಲಾಗಿವೆ. ಹೆಚ್ಚು ಸಾಂಕ್ರಾಮಿಕ ಕಾಯಿಲೆಯಿಂದ ಬಳಲುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಈಗ ನಾಲ್ಕನೇ ಸ್ಥಾನದಲ್ಲಿದೆ.

Trending News