ಪ್ರಧಾನಿ ನರೇಂದ್ರ ಮೋದಿಗೆ ಇಂದು 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್' ಪ್ರಧಾನ

ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಗೌರವ ಪುರಸ್ಕಾರ 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್'  

Last Updated : Oct 3, 2018, 10:15 AM IST
ಪ್ರಧಾನಿ ನರೇಂದ್ರ ಮೋದಿಗೆ ಇಂದು 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್' ಪ್ರಧಾನ title=

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಶ್ವಸಂಸ್ಥೆಯ ಅತ್ಯುನ್ನತ ಗೌರವ ಪುರಸ್ಕಾರ 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್' ಅನ್ನು ಪ್ರವಾಸಿ ಭಾರತೀಯ ಕೇಂದ್ರದಲ್ಲಿ ಇಂದು ಪ್ರಧಾನ ಮಾಡಲಾಗುವುದು.

ಸೆಪ್ಟೆಂಬರ್ 26 ರಂದು ಈ ಪುರಸ್ಕಾರ ಘೋಷಣೆಯಾಗಿದ್ದು, ವಿಶ್ವಸಂಸ್ಥೆಯ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ನೀಡುವ ಅತ್ಯುನ್ನತ ಗೌರವ ಪುರಸ್ಕಾರ 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್' ಅನ್ನು ಪ್ರಧಾನಿ ಮೋದಿ ಅವರಿಗೆ ನೀಡಲಾಗುತ್ತಿದೆ. ಭಾರತದಲ್ಲಿ 2022ರ ವೇಳೆಗೆ ಪ್ಲಾಸ್ಟಿಕ್ ಬಳಕೆ ನಿರ್ಮೂಲನೆಗಾಗಿ ಕೈಗೊಂಡಿರುವ ಕ್ರಮಗಳು ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸೌರಶಕ್ತಿ ರಾಷ್ಟ್ರಗಳ ಮೈತ್ರಿಯಲ್ಲಿನ ನಾಯಕತ್ವವನ್ನು ಪರಿಗಣಿಸಿ ಪ್ರಧಾನಿ ಮೋದಿ ಅವರಿಗೆ ಈ ಪುರಸ್ಕಾರ ನೀಡಲಾಗುತ್ತಿದೆ.

ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕೊಡುಗೆ ನೀಡಿರುವ ಮತ್ತು ಪರಿಸರಕ್ಕೆ ಸಂಬಂಧಿತ ತುರ್ತು ಸಮಸ್ಯೆಗಳ ನಿವಾರಣೆಗಾಗಿ ಕೈಗೊಳ್ಳುವ ವಿನೂತನ ಕ್ರಮ ಮತ್ತು ಪ್ರಯತ್ನವನ್ನು ಗಮನಿಸಿ ಜಗತ್ತಿನ ಆರು ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ 'ಚಾಂಪಿಯನ್ಸ್ ಆಫ್ ದಿ ಅರ್ಥ್ ಅವಾರ್ಡ್' ನೀಡಲಾಗುತ್ತಿದೆ.

Trending News