ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಅಧಿಕೃತ ಎಂಟ್ರಿ; ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವದ್ರಾ ಅವರನ್ನು ಅಖಿಲ ಭಾರತ ಪ್ರದೇಶ ಕಾಂಗ್ರೆಸ್ ಸಮತಿಯ ಉತ್ತರಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

Last Updated : Jan 23, 2019, 01:56 PM IST
ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಅಧಿಕೃತ ಎಂಟ್ರಿ; ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ title=

ನವದೆಹಲಿ: ಉತ್ತರಪ್ರದೇಶದ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವದ್ರಾ ಅವರನ್ನು ಅಖಿಲ ಭಾರತ ಪ್ರದೇಶ ಕಾಂಗ್ರೆಸ್ ಸಮತಿಯ ಉತ್ತರಪ್ರದೇಶ ಪೂರ್ವ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ.

ಇವರೊಂದಿಗೆ, ಉತ್ತರಪ್ರದೇಶ ಪಶ್ಚಿಮ ವಿಭಾಗದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿರಾಧಿತ್ಯ ಸಿಂಧ್ಯ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಪ್ರಧಾನ ಕಾರ್ಯದರ್ಶಿ(ಸಂಘಟನೆ)ಯಾಗಿ ನೇಮಕ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್ ಒಂದು ರಾಜ್ಯದಲ್ಲಿ ಇಬ್ಬರನ್ನು ಪ್ರಧಾನ ಕಾರ್ಯದರ್ಶಿಗಲಾಗಿ ನೇಮಕ ಮಾಡಿದೆ. ಗುಲಾಂ ನಬಿ ಆಜಾದ್ ಅವರನ್ನು ಹರಿಯಾಣದ ಉಸ್ತುವಾರಿಯನ್ನಾಗಿಯೂ ನೇಮಕ ಮಾಡಲಾಗಿದೆ. ಉಳಿದಂತೆ ಕೆ.ಸಿ.ವೇಣುಗೋಪಾಲ್ ಅವರು ಕರ್ನಾಟಕ ರಾಜ್ಯ ಉಸ್ತುವಾರಿಯಾಗಿಯೂ ಮುಂದುವರಿಯಲಿದ್ದಾರೆ. 

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸಂಬಿತ್ ಪಾತ್ರ, ಪಕ್ಷವನ್ನು ಮುನ್ನಡೆಸುವಲ್ಲಿ ರಾಹುಲ್ ಗಾಂಧಿ ವಿಫಲರಾದ ಕಾರಣ ಪ್ರಿಯಾಂಕ ಗಾಂಧಿ ಅವರನ್ನು ಅಧಿಕೃತವಾಗಿ ಸಕ್ರಿಯ ರಾಜಕಾರಣಕ್ಕೆ ಕರೆತರಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ ಕೇಂದ್ರ ಸಚಿವ ಮಹೇಶ್ ಶರ್ಮಾ ಮಾತನಾಡಿ, "ಪ್ರಿಯಾಂಕಾ ಗಾಂಧಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಿರುವುದು ಕಾಂಗ್ರೆಸ್ನ ಖಾಸಗಿ ವಿಷಯ. ಆದರೆ, ಕಾಂಗ್ರೆಸ್ ಎಲ್ಲದರಲ್ಲೂ ಕುಟುಂಬ ರಾಜಕಾರಣವನ್ನು ಮಾಡುತ್ತದೆ" ಎಂದು ಹೇಳಿದ್ದಾರೆ. 
 

Trending News