Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭೇಟಿಯ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರು ಬುಧವಾರ ಸಭೆಗಾಗಿ ನವದೆಹಲಿಯ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಆಗಮಿಸಿದರು.

Written by - Zee Kannada News Desk | Last Updated : Jun 30, 2021, 09:46 PM IST
  • ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭೇಟಿಯ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರು ಬುಧವಾರ ಸಭೆಗಾಗಿ ನವದೆಹಲಿಯ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಆಗಮಿಸಿದರು.
  • ನವಜೋತ್ ಸಿಂಗ್ ಸಿಧು (Navjot Singh Sidhu) ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಡುವಿನ ಸಮರದ ಬೆನ್ನಲ್ಲೇ ಈಗ ಈ ಬೆಳವಣಿಗೆ ನಡೆದಿದೆ.
Punjab Congress Crisis: ರಾಹುಲ್ ಗಾಂಧಿ ಭೇಟಿಯಾದ ನವಜೋತ್ ಸಿಂಗ್ ಸಿಧು  title=

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭೇಟಿಯ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ಮುಖಂಡ ಮತ್ತು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರು ಬುಧವಾರ ಸಭೆಗಾಗಿ ನವದೆಹಲಿಯ ರಾಹುಲ್ ಗಾಂಧಿ ಅವರ ನಿವಾಸಕ್ಕೆ ಆಗಮಿಸಿದರು.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ರಾಜೀನಾಮೆ ಸ್ವೀಕರಿಸಿದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

ನವಜೋತ್ ಸಿಂಗ್ ಸಿಧು (Navjot Singh Sidhu) ಮತ್ತು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಡುವಿನ ಸಮರದ ಬೆನ್ನಲ್ಲೇ ಈಗ ಈ ಬೆಳವಣಿಗೆ ನಡೆದಿದೆ.ಇದಕ್ಕೂ ಮುನ್ನ ಬುಧವಾರ ಬೆಳಿಗ್ಗೆ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು, ಇದರಲ್ಲಿ ಅವರು ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ರಾಜ್ಯ ಘಟಕದಲ್ಲಿ ಪುನರುಜ್ಜೀವನಗೊಳಿಸುವಲ್ಲಿ ತಮ್ಮ ಪಾತ್ರದ ಬಗ್ಗೆ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನವಜೋತ್ ಸಿಂಗ್ ಸಿಧು ಗೆ ಔತಣಕೂಟಕ್ಕೆ ಆಹ್ವಾನ ನೀಡಿ ಅಚ್ಚರಿ ಮೂಡಿಸಿದ ಸಿಎಂ ಅಮರಿಂದರ್ ಸಿಂಗ್

ರಾಹುಲ್ ಗಾಂಧಿಯನ್ನು ಭೇಟಿಯಾಗಲು ನಿರ್ಧರಿಸಲಾಗಿದೆ ಎಂದು ಸಿಧು ಮಂಗಳವಾರ ಹೇಳಿದ್ದಾರೆ ಆದರೆ ನಂತರದವರು ಅವರೊಂದಿಗೆ ಯಾವುದೇ ನಿಗದಿತ ಸಭೆ ಇಲ್ಲ ಎಂದು ನಿರಾಕರಿಸಿದರು.2019 ರಲ್ಲಿ ಸ್ಥಳೀಯ ಸಂಸ್ಥೆಗಳ ಖಾತೆಯನ್ನು ತ್ಯಜಿಸಿದ ನಂತರ ಸಿಧು ಪಂಜಾಬ್ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಕರ್ತಾರಪುರ್ ಕಾರಿಡಾರ್: ಮೋದಿಗೆ 'ಮುನ್ನಾಭಾಯ್ ಎಂಬಿಬಿಎಸ್' ಶೈಲಿಯ ಅಪ್ಪುಗೆ ಎಂದ ಸಿಧು..!

ಕಾಂಗ್ರೆಸ್ ಪಕ್ಷವು ಸಿಧು ಅವರಿಗೆ ಮತ್ತೊಮ್ಮೆ ಮಂತ್ರಿ ಮಾಡುವಲ್ಲಿ ಉತ್ಸುಕತೆ ತೋರುತ್ತಿದ್ದರೆ, ಸಿಧು ಮಾತ್ರ ಅಮರಿಂದರ್ ಅವರ ಸಂಪುಟದಲ್ಲಿ ಕೆಲಸ ಮಾಡಲು ನಿರಾಕರಿಸುತ್ತಿದ್ದಾರೆ ಎಂದು ಅವರ ಮೂಲಗಳು ತಿಳಿಸಿವೆ.ಏತನ್ಮಧ್ಯೆ, ರಾಹುಲ್ ಗಾಂಧಿ ಅವರು ಪಂಜಾಬ್‌ನ ಪಕ್ಷದ ಮುಖಂಡರನ್ನು ರಾಜಕೀಯ ಪರಿಸ್ಥಿತಿ ಮತ್ತು 2022 ರ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಬಲಪಡಿಸಲು ಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : CRICURU App : ಕ್ರಿಕೆಟ್ ತರಬೇತಿಗೆ 'ಆ್ಯಪ್' ಆರಂಭಿಸಿದ ವೀರೇಂದ್ರ ಸೆಹ್ವಾಗ್!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News