ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿ ಅಪಹರಣ, ಹತ್ಯೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಗ್ರಾಹಕ ಸೇವಾ ಕೇಂದ್ರದ ಅಧಿಕಾರಿ ಪಿಂಟು ಸಿಂಗ್ ಎಂಬವರನ್ನು ಶುಕ್ರವಾರ ರಾತ್ರಿ 11ಗಂಟೆ ಸುಮಾರಿಗೆ ಅಪಹರಣ ಮಾಡಿ, ಹತ್ಯೆ ಮಾಡಲಾಗಿದೆ.

Last Updated : Dec 22, 2018, 05:05 PM IST
ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿ ಅಪಹರಣ, ಹತ್ಯೆ title=

ಗಯಾ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿ, ನಂತರ ಹತ್ಯೆ ಮಾಡಿದ ಘಟನೆ ಶನಿವಾರ ಬಿಹಾರದ ಗಯಾ ಜಿಲ್ಲೆಯಲ್ಲಿ ನಡೆದಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಗ್ರಾಹಕ ಸೇವಾ ಕೇಂದ್ರದ ಅಧಿಕಾರಿ ಪಿಂಟು ಸಿಂಗ್ ಎಂಬವರನ್ನು ಶುಕ್ರವಾರ ರಾತ್ರಿ 11ಗಂಟೆ ಸುಮಾರಿಗೆ ಅಪಹರಣ ಮಾಡಿದ್ದ ದುಷ್ಕರ್ಮಿಗಳು, ಶನಿವಾರ ಮುಂಜಾನೆ 2 ಗಂಟೆ ಸಂದರ್ಭದಲ್ಲಿ ಅವರನ್ನು ಹತ್ಯೆ ಮಾಡಿದ್ದಾರೆ. ಸಿಂಗ್ ತಲೆ ಭಾಗದಲ್ಲಿ ಆಳವಾದ ಗಾಯವಾಗಿದೆ  ಎಂದು ಅಮಾಸ್ ಪೊಲೀಸ್ ಠಾಣೆ ಅಧಿಕಾರಿ ಶ್ಯಾಮ್ ಲಾಲ್ ಸರಹ್ ಹೇಳಿದ್ದಾರೆ. 

ಬಿಹಾರದಲ್ಲಿ ಕಳೆದ 48 ಗಂಟೆಗಳಲ್ಲಿ ನಡೆದ ಎರಡನೇ ಕೊಲೆ ಇದಾಗಿದ್ದು, ವೈಶಾಲಿ ಜಿಲ್ಲೆಯಲ್ಲಿ ಗಂಜಾನ್ ಖೆಮ್ಕಾ ಎಂಬ ಉದ್ಯಮಿಯನ್ನು ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಒಂದರ ಹಿಂದೆ ಮತ್ತೊಂದು ಕೊಲೆ ನಡೆದ ಹಿನ್ನೆಲೆಯಲ್ಲಿ ಈ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ, ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಫಲವಾಗಿದ್ದಾರೆ ಎಂದು ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

Trending News