ನವದೆಹಲಿ: ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಭಾರತೀಯ ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿದೇವಿ ಮತ್ತು ಗಣೇಶ ದೇವರ ಭಾವಚಿತ್ರಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಲಹೆ ನೀಡಿದ್ದಾರೆ ಎಂದು ಸುದಿಸಂಸ್ಥೆ ANI ವರದಿ ಮಾಡಿದೆ.
ಈ ಬಗ್ಗೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ಲಕ್ಷ್ಮಿದೇವಿ, ಗಣೇಶ ದೇವರ ಫೋಟೊಗಳನ್ನು ಸಹ ಮುದ್ರಿಸಬೇಕು ಅನ್ನೋದು ನನ್ನ ಬಯಕೆ. ಈ ಕುರಿತು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಾನು ಮನವಿ ಮಾಡುತ್ತಿದ್ದೇನೆ’ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ತಮಿಳುನಾಡು ಕಾರ್ ಬ್ಲಾಸ್ಟ್ : ISIS ಕುರಿತ ರೋಚಕ ಮಾಹಿತಿ ಬಿಚ್ಚಿಟ್ಟ ಅಣ್ಣಾಮಲೈ..!
I appeal to the central govt & the PM to put the photo of Shri Ganesh Ji & Shri Laxmi Ji, along with Gandhi Ji's photo on our fresh currency notes, says Delhi CM & AAP national convenor Arvind Kejriwal pic.twitter.com/t0AWliDn75
— ANI (@ANI) October 26, 2022
ಇಂಡೋನೇಷ್ಯಾ ತಮ್ಮ ಕರೆನ್ಸಿ ನೋಟುಗಳಲ್ಲಿ ಗಣೇಶ ದೇವರ ಫೋಟೋ ಮುದ್ರಿಸಿದೆ. ಹೀಗಾಗಿ ನಾವೇಕೆ ನಮ್ಮ ಕರೆನ್ಸಿ ನೋಟುಗಳ ಮೇಲೆ ಗಣೇಶನ ಫೋಟೋ ಮುದ್ರಿಸಬಾರದು? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ನಾನು ಕೇಂದ್ರ ಸರ್ಕಾರಕ್ಕೆ ನಾಳೆ ಅಥವಾ ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಪತ್ರ ಬರೆದು ಮನವಿ ಮಾಡುತ್ತೇನೆ ಅಂತಾ ಅವರು ಹೇಳಿದ್ದಾರೆ.
ದೇಶದಲ್ಲಿ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ. ದೇಶದ ಆರ್ಥಿಕತೆ ಸುಧಾರಿಸಲು ಹಲವಾರು ಹಂತಗಳಿವೆ, ಈ ಪೈಕಿ ಹೆಚ್ಚಿನ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ಮೂಲಸೌಕರ್ಯ ಸೌಲಭ್ಯಗಳನ್ನು ಸುಧಾರಿಸುವುದು’ ಅಂತಾ ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ: Mallikarjun Kharge: ಉತ್ತರ ಭಾರತದಲ್ಲಿ ದಕ್ಷಿಣ ಕಲಿಯ ಪರ್ವ ಆರಂಭ, 51 ವರ್ಷಗಳ ಬಳಿಕ ಕಾಂಗ್ರೆಸ್ಗೆ ದಲಿತ ಅಧ್ಯಕ್ಷ!
‘ನಮ್ಮ ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಕಷ್ಟು ಪ್ರಯತ್ನ ಮಾಡಬೇಕಿದೆ. ನಾವು ಎಷ್ಟೇ ಪ್ರಯತ್ನಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯದಿದ್ದರೆ, ಆಗ ನಮಗೆ ಪರಮಾತ್ಮನ ಆಶೀರ್ವಾದ ಬೇಕಾಗುತ್ತದೆ. ಹೀಗಾಗಿ ಹೊಸದಾಗಿ ಮುದ್ರಿಸುವ ನೋಟುಗಳಲ್ಲಿ ಲಕ್ಷ್ಮಿದೇವಿ ಮತ್ತು ಗಣೇಶ ದೇವರ ಭಾವಚಿತ್ರಗಳಿದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ’ ಅಂತಾ ಕೇಜ್ರಿವಾಲ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ