Rahul Gandhi: ‘ಚುನಾವಣೆ ಆಫರ್ ಮುಗಿತಾ ಬಂತು, ಬೇಗ ಪೆಟ್ರೋಲ್ ಟ್ಯಾಂಕ್ ತುಂಬಿಸಿಕೊಳ್ಳಿ’

ಉಕ್ರೇನ್ ಮತ್ತು ರಷ್ಯಾ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ. ಈಗಾಗಲೇ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.

Written by - Zee Kannada News Desk | Last Updated : Mar 6, 2022, 08:18 AM IST
  • ಮಾರ್ಚ್ 7ರಂದು ಉತ್ತರಪ್ರದೇಶದಲ್ಲಿ 7ನೇ ಹಾಗೂ ಕೊನೆ ಹಂತದ ಮತದಾನ ನಡೆಯಲಿದೆ
  • ತಕ್ಷಣ ಪೆಟ್ರೋಲ್ ಟ್ಯಾಂಕ್ ತುಂಬಿಸಿಕೊಳ್ಳಿ. ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯುವ ಹಂತದಲ್ಲಿದೆ!
  • ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯ
Rahul Gandhi: ‘ಚುನಾವಣೆ ಆಫರ್ ಮುಗಿತಾ ಬಂತು, ಬೇಗ ಪೆಟ್ರೋಲ್ ಟ್ಯಾಂಕ್ ತುಂಬಿಸಿಕೊಳ್ಳಿ’  title=
ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯ

ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ(5 State Election) ಅಂತಿಮಘಟ್ಟ ತಲುಪಿವೆ. ಸೋಮವಾರ(ಮಾರ್ಚ್ 7) ಉತ್ತರಪ್ರದೇಶದಲ್ಲಿ 7ನೇ ಹಾಗೂ ಕೊನೆ ಹಂತದ ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಬಿಜೆಪಿ-ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ಕೆಲವೇ ದಿನಗಳಲ್ಲಿ ನಿರ್ಧಾರವಾಗಲಿದೆ.

ಉತ್ತರಪ್ರದೇಶದ ಅಂತಿಮ ದಿನದ ಮತದಾನಕ್ಕೆ ಕೇವಲ 2 ದಿನ ಬಾಕಿ ಇರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandh) ಅವರು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ತೈಲದರ ಗಗಣಕ್ಕೆ ಏರಲಿದ್ದು,ಮ ಜನರು ತಮ್ಮ ವಾಹನಗಳ ಟ್ಯಾಂಕ್ ಗಳನ್ನು ಭರ್ತಿ ಮಾಡಿಕೊಳ್ಳಿ ಅಂತಾ ಸಲಹೆ ನೀಡಿದ್ದಾರೆ. ಹೀಗೆ ಹೇಳುವ ಮೂಲಕ ಬಿಜೆಪಿ ಸರ್ಕಾರ(BJP Government)ಕ್ಕೆ ರಾಹುಲ್ ಕುಟುಕಿದ್ದಾರೆ.

ಇದನ್ನೂ ಓದಿ: Russia-Ukrain War ನಿಂದ ನಿಮ್ಮ ಜೇಬಿನ ಮೇಲೆ ಏನು ಪ್ರಭಾವ?

‘ತಕ್ಷಣವೇ ನಿಮ್ಮ ಪೆಟ್ರೋಲ್ ಟ್ಯಾಂಕ್ ತುಂಬಿಸಿಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ(PM Modi) ಸರ್ಕಾರದ ‘ಚುನಾವಣೆ’ ಆಫರ್ ಮುಗಿಯುವ ಹಂತದಲ್ಲಿದೆ!’ ಅಂತಾ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ. ಉಕ್ರೇನ್ ಮತ್ತು ರಷ್ಯಾ ಯುದ್ಧದ ಪರಿಣಾಮ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುವ ಭೀತಿ ಎದುರಾಗಿದೆ. ಈಗಾಗಲೇ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.

ಕಚ್ಚಾ ತೈಲ ದರ(Fuel Price) ದಲ್ಲಿ ಗಣನೀಯ ಏರಿಕೆ ಕಂಡಿದ್ದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ಉತ್ತರ ಪ್ರದೇಶ ಸೇರಿದಂತೆ 5 ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾದಾಗಿನಿಂದ ಭಾರತದಾದ್ಯಂತ ಇಂಧನ ದರದಲ್ಲಿ ಯಥಾಸ್ಥಿತಿ ಮುಂದುವರೆದಿದೆ. ಸೋಮವಾರ ಕೊನೆ ಹಂತದ ಮತದಾನ ಮುಗಿಯುತ್ತಿದ್ದಂತೆಯೇ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: UIDAI ಹೊಸ ನಿಯಮ : ವಿಳಾಸ ಪುರಾವೆ ಇಲ್ಲದೆಯೂ Aadhaar Card ಪಡೆಯಬಹುದು!    

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ದೇಶದ ಜನರ ಮೇಲೆ ಮತ್ತಷ್ಟು ತೈಲಹೊರೆ ಜಾಸ್ತಿಯಾಗಲಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ದೃಷ್ಟಿಯಿಂದ ಇಂಧನ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಪೆಟ್ರೋಲ್-ಡಿಸೇಲ್ ದರ(Petrol Diesel Prices) ಏರಿಕೆಯಾಗಿ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ.    

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News